ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚುತ್ತಿದ್ದು, ನಮ್ಮ ಮೇಲೆ ದಾಳಿ ನಡೆಸಿದ ಆರೋಪಿಗಳಿಗೆ ಕೇವಲ ಶಿಕ್ಷೆ ನೀಡದೆ, ಕೊಲೆ ಮಾಡಲು ಸ್ತ್ರೀಯರಿಗೆ ಒಂದು ಅವಕಾಶ ನೀಡಿ ಎಂದು ಎನ್‌ಸಿಪಿಯ ಶರದ್ ಪವಾರ್ ಬಣದ ಮಹಿಳಾ ಘಟಕದ ಅಧ್ಯಕ್ಷೆ ರೋಹಿಣಿ ಖಡ್ಸೆ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪತ್ರ ಬರೆದಿದ್ದಾರೆ.
ಮುಂಬೈನಲ್ಲಿ ಇತ್ತೀಚೆಗೆ ನಡೆದಿರುವ 12 ವರ್ಷದ ಬಾಲಕಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣ ಉಲ್ಲೇಖಿಸಿ, ಜನಸಂಖ್ಯಾ ಪರಿಶೀಲನಾ ವರದಿಯಲ್ಲಿ ಏಷ್ಯಾದಲ್ಲಿ ಸುರಕ್ಷತೆ ಮತ್ತು ಭದ್ರತೆ ವಿಚಾರದಲ್ಲಿ ಭಾರತವೇ ಮಹಿಳೆಯರಿಗೆ ಅಸುರಕ್ಷಿತ ದೇಶ ಎಂದು ಬಯಲಾಗಿದೆ ಎಂದರು.
ನಮ್ಮ ದೇಶದಲ್ಲಿ ಮಹಿಳೆಯರು ದುರ್ಬಲರಾಗಿದ್ದಾರೆ. ಏಕೆಂದರೆ ಅವರ ಮೇಲೆ ದೌರ್ಜನ್ಯ ಹೆಚ್ಚುತ್ತಿದೆ. ಈ ಸನ್ನಿವೇಶ ಗಮನಿಸಿದರೆ ಒಂದು ಕೊಲೆಗೆ ಅವಕಾಶ ನೀಡಬೇಕು ಎಂದು ಬರೆದಿದ್ದಾರೆ.