ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನಟ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ಯಾವಾಗ ನಡೆಯಲಿದೆ ಎಂಬ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕೃತ ಘೋಷಣೆ ಮಾಡಿದ್ದು, ಭಾನುವಾರ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಪುನೀತ್ ಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲು ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ. ಕಂಠೀರವ ಸ್ಟುಡಿಯೋದಲ್ಲಿ ಅವರ ತಂದೆ-ತಾಯಿಯಾದ ಡಾ. ರಾಜ್ ಕುಮಾರ್ ಹಾಗೂ, ಪಾರ್ವತಮ್ಮನವರ ಸಮಾಧಿ ಪಕ್ಕದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು.
ಪವರ್ ಸ್ಟಾರ್ ಪುನೀತ್ ಶುಕ್ರವಾರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ
ಕಂಠೀರವ ಸ್ಟುಡಿಯೋದಲ್ಲಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ಪುನೀತ್ ರಾಜ್ಕುಮಾರ್ ಹಿರಿಯ ಮಗಳು ದ್ರುತಿ ಈಗಾಗಲೇ ಅಮೆರಿಕಾದಿಂದ ದೆಹಲಿದೆ ಬಂದಿದ್ದು, ಸಂಜೆ ಹೊತ್ತಿಗೆ ಬೆಂಗಳೂರಿಗೆ ಬರಲಿದ್ದಾರೆ.