ಇಂದು ಪಂಜಾಬ್‌, ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ: ತಪ್ಪದೇ ಮತ ಚಲಾಯಿಸಲು ಯುವಕರಿಗೆ ಪ್ರಧಾನಿ ಮೋದಿ ಕರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಂದು ಪಂಜಾಬ್‌ ನಲ್ಲಿ ವಿಧಾನಸಭಾ ಚುನಾವಣೆ ಹಾಗೂ ಉತ್ತರ ಪ್ರದೇಶದಲ್ಲಿ ಮೂರನೇ ಹಂತದ ಮತದಾನ ಶುರುವಾಗಿದೆ.
ಪಂಜಾಬ್‌ ನಲ್ಲಿ ಒಟ್ಟು 117 ವಿಧಾನಸಭಾ ಕ್ಷೇತ್ರದಿಂದ 1304 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ.
ಪಂಜಾಬ್​ ಸಿಎಂ ಚರಣಜಿತ್​ ಸಿಂಗ್​ ಛನ್ನಿ, ಆಮ್​ ಆದ್ಮಿ ಪಾರ್ಟಿಯ ಭಗವಂತ್ ಮನ್, ಪಂಜಾಬ್​ ಕಾಂಗ್ರೆಸ್​ ಮುಖ್ಯಸ್ಥ ನವಜೋತ್​ ಸಿಂಗ್ ಸಿಧು, ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್​, ಪ್ರಕಾಶ್​ ಸಿಂಗ್​ ಬಾದಲ್​ ಮತ್ತು ಶಿರೋಮಣಿ ಅಕಾಲಿ ದಳದ ಅಧ್ಯಕ್ಷ ಸುಖ್ಬೀರ್​ ಸಿಂಗ್​ಇತರರು ಇಂದು ಕಣದಲ್ಲಿದ್ದಾರೆ.
ಉತ್ತರ ಪ್ರದೇಶದಲ್ಲಿ ಕೂಡ ಇಂದು 16 ಜಿಲ್ಲೆಗಳ 59 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಇದರಲ್ಲಿ 627 ಅಭ್ಯರ್ಥಿಗಳು ಕಣದಲ್ಲಿದ್ದು, 2.15 ಕೋಟಿ ಮಂದಿ ಮತದಾನ ಮಾಡಲಿದ್ದಾರೆ. ಉತ್ತರ ಪ್ರದೇಶದ ಹತ್ರಾಸ್​, ಫಿರೋಜಾಬಾದ್​, ಇಟಾ, ಕಸಗಂಜ್​, ಮೇನ್​​ಪುರಿ, ಫರೂಖಾಬಾದ್​, ಕನ್ನೌಜ್​, ಕರ್ಹಾಲ್​​ ಗಳಲ್ಲಿ ಇಂದು ಮತದಾನ ನಡೆಯುತ್ತಿದೆ.
ಕರ್ಹಾಲ್​ನಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್​ ಯಾದವ್​ ಸ್ಪರ್ಧಿಸಿದ್ದು,  ಬಿಜೆಪಿಯಿಂದ ಎಸ್​ಪಿ ಬಾಘೇಲ್​ ಪ್ರತಿಸ್ಪರ್ಧಿಯಾಗಿದ್ದಾರೆ.
ಪಂಜಾಬ್‌ ಚುನಾವಣೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದು, ಇಂದು ನಡೆಯುತ್ತಿರುವ ಉತ್ತರ ಪ್ರದೇಶ ಹಾಗೂ ಪಂಜಾಬ್‌ ಚುನಾವಣೆಯಲ್ಲಿ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕು. ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ಯುವಕರು ತಪ್ಪದೆ ಮತ ಚಲಾಯಿಸಿ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!