ವೈದ್ಯೆಯ ‘ಕೈ’ ಹಿಡಿದ ಪಂಜಾಬ್ ಮುಖ್ಯಮಂತ್ರಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಗುರುವಾರ ವೈದ್ಯೆ ಗುರುಪ್ರೀತ್ ಕೌರ್ ಅವರೊಂದಿಗೆ ಸರಳವಾಗಿ ವಿವಾಹವಾದರು.
ಈ ಸಂಭ್ರಮಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ, ಕುಟುಂಬ ಸದಸ್ಯರು ಮತ್ತು ಆಪ್ತರು ಪಾಲ್ಗೊಂಡಿದ್ದರು.
ಚಂಡೀಗಢದ ಭಗವಂತ್ ಮಾನ್ ನಿವಾಸದಲ್ಲಿ ಖಾಸಗಿಯಾಗಿ ವಿವಾಹ ಸಮಾರಂಭ ನೆರವೇರಿತ್ತು.
ಇಂದು ನನ್ನ ಕಿರಿಯ ಸಹೋದರ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಜೀ ವಿವಾಹವಾಗುವ ಮೂಲಕ ಹೊಸ ಜೀವನ ಆರಂಭಿಸಿದ್ದು, ನನಗೆ ತುಂಬಾ ಖುಷಿಯ ವಿಚಾರವಾಗಿದೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.ಇಬ್ಬರಿಗೂ ದೇವರು ಒಳ್ಳೆಯದು ಮಾಡಲಿ, ಅವರ ವೈವಾಹಿಕ ಜೀವನ ಸುಖಕರವಾಗಿರಲಿ ಎಂದು ಹಾರೈಸುವುದಾಗಿ ಅರವಿಂದ್ ಕೇಜ್ರಿವಾಲ್ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!