ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್- ಹರಿಯಾಣ ಗಡಿಯಲ್ಲಿ ರೈತರ ಪ್ರತಿಭಟನೆ (Farmers protest, farmers marc, Delhi chalo) ವೇಳೆ ಮೃತಪಟ್ಟ 22 ವರ್ಷದ ರೈತ ಶುಭಕರನ್ ಸಿಂಗ್ (Shubh Karan Singh) ಅವರ ಕುಟುಂಬಕ್ಕೆ ಪಂಜಾಬ್ ಸರ್ಕಾರದಿಂದ 1 ಕೋಟಿ ರೂಪಾಯಿ ಆರ್ಥಿಕ ನೆರವನ್ನು (Compensation) ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Punjab CM Bhagwant Mann) ಘೋಷಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿಗಳು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಜೊತೆಗೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ಕೂಡ ನೀಡಿದ್ದಾರೆ.
ਖਨੌਰੀ ਬਾਰਡਰ ਤੇ ਕਿਸਾਨ ਅੰਦੋਲਨ ਦੌਰਾਨ ਸ਼ਹੀਦ ਹੋਏ ਨੌਜਵਾਨ ਸ਼ੁਭਕਰਨ ਸਿੰਘ ਦੇ ਪਰਿਵਰ ਨੂੰ ਪੰਜਾਬ ਸਰਕਾਰ ਵੱਲੋਂ 1 ਕਰੋੜ ਰੁਪਏ ਦੀ ਆਰਥਿਕ ਸਹਾਇਤਾ ਅਤੇ ਛੋਟੀ ਭੈਣ ਨੂੰ ਸਰਕਾਰੀ ਨੌਕਰੀ ਦਿੱਤੀ ਜਾਵੇਗੀ..ਦੋਸ਼ੀਆਂ ਵਿਰੁੱਧ ਬਣਦੀ ਕਾਨੂੰਨੀ ਕਾਰਵਾਈ ਕੀਤੀ ਜਾਵੇਗੀ..ਫਰਜ਼ ਨਿਭਾ ਰਹੇ ਹਾਂ..
— Bhagwant Mann (@BhagwantMann) February 23, 2024
ಶುಭಕರನ್ ಸಿಂಗ್ ಅವರ ಕುಟುಂಬಕ್ಕೆ ಆರ್ಥಿಕ ನೆರವಿನ ಜೊತೆಗೆ ಅವರ ತಂಗಿಗೆ ಸರ್ಕಾರಿ ನೌಕರಿ ನೀಡಲಾಗುವುದು. ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದುʼ ಎಂದು ಮಾನ್ ಹೇಳಿದ್ದಾರೆ.
ಬುಧವಾರ ಖಾನೌರಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕತ್ತಿನ ಹಿಂಭಾಗಕ್ಕೆ ಗಾಯವಾಗಿ ಶುಭಕರನ್ ಮೃತಪಟ್ಟಿದ್ದರು. ಇದರಿಂದಾಗಿ ಕೇಂದ್ರದೊಂದಿಗಿನ ಮಾತುಕತೆಯನ್ನು ರೈತ ಮುಖಂಡರು ಸ್ಥಗಿತಗೊಳಿಸಿದ್ದರು.
ರೈತರ ನೇತೃತ್ವದಲ್ಲಿ ನಡೆಯುತ್ತಿರುವ ‘ದಿಲ್ಲಿ ಚಲೋ’ ಮೆರವಣಿಗೆ ಶುಕ್ರವಾರ ಪುನರಾರಂಭಗೊಂಡಿದೆ. ಶುಭಕರನ್ ಸಿಂಗ್ ಅವರ ಶೋಕಾರ್ಥವಾಗಿ ಶುಕ್ರವಾರವನ್ನು “ಕರಾಳ ದಿನ” ಎಂದು ಆಚರಿಸಲು ರೈತ ಮುಖಂಡರು ಮುಂದಾಗಿದ್ದಾರೆ. ಭಾರತಿ ಕಿಸಾನ್ ಯೂನಿಯನ್ (ಸಿಧುಪುರ್) ಅಧ್ಯಕ್ಷ ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಸಂಚಾಲಕ ಸರ್ವಣ್ ಸಿಂಗ್ ಪಂಧರ್ ಅವರು ಶುಭಕರನ್ ಸಿಂಗ್ ಅವರನ್ನು “ಹುತಾತ್ಮ” ಎಂದು ಘೋಷಿಸಲು ಪಂಜಾಬ್ ಸರ್ಕಾರಕ್ಕೆ ಒತ್ತಾಯಿಸಿದರು. ಜನರು ತಮ್ಮ ಮನೆ, ಅಂಗಡಿಗಳು ಮತ್ತು ವಾಹನಗಳ ಮೇಲೆ ಕಪ್ಪು ಬಾವುಟಗಳನ್ನು ಹಾರಿಸುವಂತೆ ಮನವಿ ಮಾಡಿದರು. ಹರ್ಯಾಣ ಸರ್ಕಾರಿ ಅಧಿಕಾರಿಗಳು ಮತ್ತು ರಾಜ್ಯ ಗೃಹ ಸಚಿವರ ವಿರುದ್ಧ ಕೊಲೆ ಆರೋಪದಡಿಯಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ರೈತರು ಒತ್ತಾಯಿಸಿದ್ದಾರೆ.