ತಿಹಾರ್ ಜೈಲಿನಲ್ಲಿ ಕೇಜ್ರಿವಾಲ್ ಭೇಟಿಯಾದ ಪಂಜಾಬ್ ಸಿಎಂ ಭಗವಂತ್ ಮಾನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 
  
ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಎಎಪಿ ರಾಷ್ಟ್ರೀಯ ಸಂಚಾಲಕರಾದ ಅರವಿಂದ್ ಕೇಜ್ರಿವಾಲ್ ಅವರನ್ನು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಇಂದು (ಮಂಗಳವಾರ) ಅವರು ಭೇಟಿಯಾಗಿದ್ದಾರೆ.

ಕೇಜ್ರಿವಾಲ್ ಅವರ ಆರೋಗ್ಯ ಚೆನ್ನಾಗಿದೆ, ಅವರು ಇನ್ಸುಲಿನ್ ಪಡೆಯುತ್ತಿದ್ದಾರೆ ಮತ್ತು ನಿಯಮಿತವಾಗಿ ತಪಾಸಣೆಗೆ ಒಳಗಾಗುತ್ತಿದ್ದಾರೆ ಎಂದು ಹಿರಿಯ ಎಎಪಿ ನಾಯಕ ಭಗವಂತ್ ಮಾನ್ ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ I.N.D.I.A ಬ್ಲಾಕ್ ಅಭ್ಯರ್ಥಿಗಳ ಪರ ಸಕ್ರಿಯವಾಗಿ ಪ್ರಚಾರ ಮಾಡಲು ದೆಹಲಿ ಮುಖ್ಯಮಂತ್ರಿ ಅವರ ಬಳಿ ಮನವಿ ಮಾಡಿದ್ದಾರೆ.

ಅರವಿಂದ್ ಕೇಜ್ರಿವಾಲ್ ಜನರು ನನ್ನ ಬಗ್ಗೆ ಚಿಂತಿಸಬಾರದು. ಚುನಾವಣೆಯ ಸಮಯದಲ್ಲಿ ಅವರು ತಮ್ಮ ಹಕ್ಕು ಚಲಾಯಿಸುವಂತೆ ಮನವಿ ಮಾಡಿರುವುದಾಗಿ ಅವರು ಹೇಳಿದ್ದಾರೆ. ಇದು 2ನೇ ಬಾರಿ ಕಳೆದ 15 ದಿನಗಳಲ್ಲಿ ಕೇಜ್ರಿವಾಲ್ ಅವರನ್ನು ಜೈಲಿನಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಭೇಟಿಯಾಗಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ತಾವು ಭರೂಚ್ ಮತ್ತು ಭಾವನಗರದಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಪ್ರಚಾರಕ್ಕಾಗಿ ಇತ್ತೀಚೆಗೆ ಗುಜರಾತ್‌ಗೆ ಭೇಟಿ ನೀಡಿದ್ದಾಗಿ ಕೇಜ್ರಿವಾಲ್‌ಗೆ ತಿಳಿಸಿದ್ದಾರೆ. ಕೇಜ್ರಿವಾಲ್ ಅವರೊಂದಿಗೆ ನಡೆದದ್ದೆಲ್ಲಾ ತಪ್ಪು ಎಂದು ಇಡೀ ದೇಶ ಹೇಳುತ್ತಿದೆ. ನಾನು ಅಸ್ಸಾಂಗೆ ಹೋಗಿದ್ದೆ. ಅವರು ದೆಹಲಿಗೆ ಬರಲು ಮತ್ತು ಉತ್ತರ ಪ್ರದೇಶ, ಮಹಾರಾಷ್ಟ್ರದಲ್ಲಿ I.N.D.I.A ಬ್ಲಾಕ್ ಅಭ್ಯರ್ಥಿಗಳ ಪರ ಪ್ರಚಾರ ಮಾಡುವಂತೆ ಕೇಳಿಕೊಂಡಿದ್ದಾರೆ ಎಂದು ಭಗವಂತ್ ಮಾನ್ ಹೇಳಿದ್ದಾರೆ.

ನಾವು ನಮ್ಮ ಕುಟುಂಬಗಳ ಬಗ್ಗೆ ಮಾತನಾಡಿದೆವು. 1 ತಿಂಗಳ ವಯಸ್ಸಿನ ನನ್ನ ಮಗಳು ನಿಯಾಮತ್ ಬಗ್ಗೆ ಕೇಳಿದರು. ಅವರು ಪಂಜಾಬ್‌ನಲ್ಲಿ ಕೃಷಿ ಉತ್ಪನ್ನಗಳು ಹೇಗಿವೆ ಮತ್ತು ಮಾದರಿ ನೀತಿ ಸಂಹಿತೆಯಿಂದಾಗಿ ಯಾವುದೇ ಸೌಲಭ್ಯಗಳಿಗೆ ತೊಂದರೆಯಾಗುತ್ತಿದೆಯೇ ಎಂದು ಕೇಳಿದರು ಎಂದು ಪಂಜಾಬ್ ಸಿಎಂ ಭಗವಂತ್ ಮಾನ್ ಹೇಳಿದ್ದಾರೆ.

ಜನರಿಗೆ ಎಲ್ಲಾ ಸೌಲಭ್ಯಗಳು ಸಿಗುತ್ತಿವೆ ಎಂದು ನಾನು ಅವರಿಗೆ ಹೇಳಿದೆ. ಪಂಜಾಬ್ ಸರ್ಕಾರಿ ಶಾಲೆಗಳ 158 ಮಕ್ಕಳು ಜೆಇಇ (ಮೇನ್ಸ್) ತೇರ್ಗಡೆಯಾಗಿದ್ದಾರೆ ಎಂದು ನಾನು ಅವರಿಗೆ ತಿಳಿಸಿದೆ. ಅವರು ಬಹಳ ಸಂತೋಷಪಟ್ಟರು. ಇದು ಶಿಕ್ಷಣ ಕ್ರಾಂತಿಯಾಗಿದೆ ಎಂದಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!