ಪಂಜಾಬ್‍ ಸಿಎಂ ಭಗವಂತ್ ಮಾನ್ ದಿಟ್ಟ ಹೆಜ್ಜೆ: ರಾಜ್ಯದಲ್ಲಿ 813 ಬಂದೂಕುಗಳ ಲೈಸನ್ಸ್ ಕ್ಯಾನ್ಸಲ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪಂಜಾಬ್‍ ಸಿಎಂ ಭಗವಂತ್ ಮಾನ್ ನೇತೃತ್ವದ ಸರ್ಕಾರ ರಾಜ್ಯದಲ್ಲಿ 813 ಬಂದೂಕುಗಳ ಪರವಾನಗಿಯನ್ನು ರದ್ದುಗೊಳಿಸಿದೆ.

ಲೂಧಿಯಾನ ಗ್ರಾಮಾಂತರದಿಂದ 87, ಶಹೀದ್ ಭಗತ್ ಸಿಂಗ್ ನಗರದಿಂದ 48, ಗುರುದಾಸ್‍ಪುರದಿಂದ 10, ಫರೀದ್‍ಕೋಟ್‍ನಿಂದ 84, ಪಠಾಣ್‍ಕೋಟ್‍ನಿಂದ 199, ಹೋಶಿಯಾಪುರದಿಂದ 47, ಕಪುರ್ತಲಾದಿಂದ 6, ಎಸ್‍ಎಎಸ್ ಕಸ್ಬಾದಿಂದ 235 ಮತ್ತು ಸಂಗ್ರೂರ್‍ನಿಂದ 16 ಪರವಾನಗಿಗಳನ್ನು ರದ್ದುಗೊಳಿಸಲಾಗಿದೆ.

ಅಮೃತಸರ ಕಮಿಷನರೇಟ್‍ನ 27 ಮತ್ತು ಜಲಂಧರ್ ಕಮಿಷನರೇಟ್‍ನ 11 ಮತ್ತು ಇತರ ಹಲವು ಜಿಲ್ಲೆಗಳ ಶಸ್ತ್ರಾಸ್ತ್ರ ಪರವಾನಗಿಯನ್ನು (Licence) ಸಹ ರದ್ದುಗೊಳಿಸಲಾಗಿದೆ. ಈ ಮೂಲಕ ಪಂಜಾಬ್ ಸರ್ಕಾರ ಇದುವರೆಗೆ 2,000 ಕ್ಕೂ ಹೆಚ್ಚು ಶಸ್ತ್ರಾಸ್ತ್ರ ಪರವಾನಗಿಗಳನ್ನು ರದ್ದುಗೊಳಿಸಿದೆ.

ಪಂಜಾಬ್‍ನಲ್ಲಿ ಸಾರ್ವಜನಿಕ ಕಾರ್ಯಕ್ರಮಗಳು, ಧಾರ್ಮಿಕ ಸ್ಥಳಗಳು, ಮದುವೆ ಸಮಾರಂಭಗಳು ಅಥವಾ ಇತರ ಯಾವುದೇ ಕಾರ್ಯಕ್ರಮಗಳಲ್ಲಿ ಶಸ್ತ್ರಾಸ್ತ್ರಗಳನ್ನು ಕೊಂಡೊಯ್ಯಲು ಹಾಗೂ ಪ್ರದರ್ಶಿಸುವುದಕ್ಕೆ ನಿಷೇಧ ಹೇರಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಇಲ್ಲಿವರೆಗೆ ಒಟ್ಟು 3,73,053 ಶಸ್ತ್ರಾಸ್ತ್ರ ಪರವಾನಗಿಗಳಿವೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!