Friday, September 5, 2025

ಪಂಜಾಬ್ ಸಿಎಂ ಭಗವಂತ್ ಮಾನ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ 2 ದಿನಗಳಿಂದ ಅವರು ಅಸ್ವಸ್ಥರಾಗಿದ್ದ ಅವರು ಔಷಧಿಗಳನ್ನ ತೆಗೆದುಕೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆದ್ರೆ, ಯಾವುದೇ ಸುಧಾರಣೆ ಇಲ್ಲದ ಕಾರಣ, ಅವರನ್ನು ಇಂದು ಆಸ್ಪತ್ರೆಗೆ ದಾಖಲಿಸಲಾಯಿತು.

ಮೂಲಗಳ ಪ್ರಕಾರ, ವೈರಲ್ ಜ್ವರ ಮತ್ತು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ