ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಚರಾಜ್ಯಗಳ ಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, 117 ಸ್ಥಾನಗಳ ಪೈಕಿ ಎಎಪಿ 89 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಪಂಜಾಬ್ ನಲ್ಲಿ ಕಾಂಗ್ರೆಸ್ ಕೇವಲ 12 ಸ್ಥಾನಗಳನ್ನು ಪಡೆಯುವ ಮೂಲಕ ಭಾರೀ ಮುಖಭಂಗ ಅನುಭವಿಸಿದ್ದು, ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯಪಾಲರಾದ ಬನ್ವಾರಿಲಾಲ್ ಪುರೋಹಿತ್ ಅವರನ್ನು ಭೇಟಿ ಮಾಡಿ ಸಿಎಂ ಚನ್ನಿ ರಾಜೀನಾಮೆ ಸಲ್ಲಿಸಬಹುದಾಗಿದೆ.
ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಮತ್ತು ಪಂಜಾಬ್ ಲೋಕ ಕಾಂಗ್ರೆಸ್ ನಾಯಕ ಅಮರಿಂದರ್ ಸಿಂಗ್ ಗೆ ಕೂಡ ತಮ್ಮ ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸಿದ್ದಾರೆ.
ಇಂದು ಬೆಳಗ್ಗೆಯಿಂದಲೇ ಚುನಾವಣಾ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಆರಂಭದಿಂದಲೂ ಎಎಪಿ ಮುನ್ನಡೆ ಸಾಧಿಸುತ್ತಾ ಬಂದಿದೆ. ಪ್ರಸ್ತುತ ಎಎಪಿ 89 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದು, ಕಾಂಗ್ರೆಸ್ 12 ಹಾಗೂ ಬಿಜೆಪಿ 5 ಸ್ಥಾನಗಳ ಮುನ್ನಡೆಯಲ್ಲಿದೆ.