ಬಜರಂಗದಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಮಲ್ಲಿಕಾರ್ಜುನ್ ಖರ್ಗೆಗೆ ಕೋರ್ಟ್‌ನಿಂದ ಸಮನ್ಸ್ 

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬಜರಂಗದಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪಂಜಾಬ್‌ನ ಸಂಗ್ರೂರ್ ನ್ಯಾಯಾಲಯ ಸೋಮವಾರ ಸಮನ್ಸ್ ಜಾರಿ ಮಾಡಿದೆ. ಖರ್ಗೆ ವಿರುದ್ಧ ಛಂಡೀಗಢ ವಿಶ್ವ ಹಿಂದು ಪರಿಷತ್‌ ಸಂಸ್ಥಾಪಕ ಹಿತೇಶ್ ಭಾರದ್ವಾಜ್ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

₹ 100 ಕೋಟಿ ಮಾನನಷ್ಟ ಮೊಕದ್ದಮೆ ಜೊತೆಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜಿಲ್ಲಾ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಇತ್ತೀಚೆಗೆ ಮುಕ್ತಾಯಗೊಂಡ ಕರ್ನಾಟಕ ಚುನಾವಣೆಯ ಸಂದರ್ಭದಲ್ಲಿ ಬಜರಂಗದಳದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಹಿತೇಶ್ ಭಾರದ್ವಾಜ್ ಅವರು ಸ್ಥಳೀಯ ನ್ಯಾಯಾಲಯದಲ್ಲಿ ಖರ್ಗೆ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಸಿವಿಲ್ ನ್ಯಾಯಾಧೀಶೆ (ಹಿರಿಯ ವಿಭಾಗ) ರಮಣದೀಪ್ ಕೌರ್ ಖರ್ಗೆ ಅವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ.

ಕಾಂಗ್ರೆಸ್ ಬಜರಂಗದಳವನ್ನು ದೇಶವಿರೋಧಿ ಸಂಘಟನೆಗಳೊಂದಿಗೆ ಹೋಲಿಸಿದೆ ಮತ್ತು ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ನಂತರ ಬಜರಂಗದಳವನ್ನು ನಿಷೇಧಿಸುವುದಾಗಿ ಭರವಸೆ ನೀಡಿದೆ ಎಂದು ಹಿತೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!