ಐಪಿಎಸ್ ಅಧಿಕಾರಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಪಂಜಾಬ್ ಶಿಕ್ಷಣ ಸಚಿವ!

ಹೊಸದಿಗಂತ ಡಿಜಿಟಲ್‌ ಡೆಸ್ಕ್ :

ಪಂಜಾಬ್ ಸರ್ಕಾರದ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಅವರು ಐಪಿಎಸ್ ಅಧಿಕಾರಿ ಜ್ಯೋತಿ ಯಾದವ್ ಅವರೊಂದಿಗೆ ಈ ತಿಂಗಳ ಕೊನೆಯಲ್ಲಿ ವಿವಾಹವಾಗಲಿದ್ದಾರೆ .
ಇತ್ತೀಚೆಗೆ ಈ ಜೋಡಿಯು ನಿಶ್ಚಿತಾರ್ಥ ಮಾಡಿಕೊಂಡಿದ್ದು, ಶಿಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ಪಂಜಾಬ್ ನ ರೂಪನಗರ ಜಿಲ್ಲೆಯ ಆನಂದಪುರ ಸಾಹಿಬ್ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿರುವ ಬೈನ್ಸ್ ಅವರು ಪ್ರಸ್ತುತ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದಾರೆ.

ವೃತ್ತಿಯಲ್ಲಿ ವಕೀಲರಾಗಿರುವ 32 ವರ್ಷದ ಬೈನ್ಸ್ ಆನಂದಪುರ ಸಾಹಿಬ್‌ನ ಗಂಭೀರ್‌ಪುರ ಗ್ರಾಮದವರು. 2014 ರಲ್ಲಿ ಚಂಡೀಗಢದ ಪಂಜಾಬ್ ವಿಶ್ವವಿದ್ಯಾನಿಲಯದಿಂದ ತಮ್ಮ ಬಿಎ, ಎಲ್‌ಎಲ್ ಬಿ ಪೂರ್ಣಗೊಳಿಸಿದರು. ಅವರು 2018 ರಲ್ಲಿ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ನಿಂದ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನಿನಲ್ಲಿ ಪ್ರಮಾಣಪತ್ರವನ್ನು ಪಡೆದಿದ್ದಾರೆ.

ಜ್ಯೋತಿ ಯಾದವ್, ಪಂಜಾಬ್-ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದು ಪ್ರಸ್ತುತ ಮಾನ್ಸಾ ಜಿಲ್ಲೆಯಲ್ಲಿ ಪೊಲೀಸ್ ಸೂಪರಿಂಟೆಂಡೆಂಟ್ ಆಗಿ ನೇಮಕಗೊಂಡಿದ್ದಾರೆ.

ಪಂಜಾಬ್ ಅಸೆಂಬ್ಲಿ ಸ್ಪೀಕರ್ ಕುಲ್ತಾರ್ ಸಿಂಗ್ ಸಂಧ್ವನ್ ಅವರು ಮುಂಬರುವ ದಿನಗಳಲ್ಲಿ ತಮ್ಮ ಜೀವನದ ಹೊಸ ಪ್ರಯಾಣವನ್ನು ಪ್ರಾರಂಭಿಸಲಿರುವ ಬೈನ್ಸ್ ಮತ್ತು ಯಾದವ್ ಅವರನ್ನು ಅಭಿನಂದಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!