ಪಂಜಾಬ್ ಚುನಾವಣೆ: ಕಾಂಗ್ರೆಸ್ ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದ ರಾಹುಲ್ ಗಾಂಧಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಪಂಜಾಬ್ ನ ಚುನಾವಣೆ ಅಖಾಡದಲ್ಲಿ ಗೆಲುವಿನ ಲೆಕ್ಕಾಚಾರ ಶುರುವಾಗಿದ್ದು, ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಸಿಎಂ ಅಭ್ಯರ್ಥಿಯಾಗಿ ಚರಂಜಿತ್ ಸಿಂಗ್ ಚನ್ನಿ ಎಂದು ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ.
ಭಾನುವಾರ ಲುಧಿಯಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರಾಹುಲ್ ಗಾಂಧಿ ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಚರಂಜಿತ್ ಸಿಂಗ್ ಚನ್ನಿ ಅವರನ್ನು ಪಕ್ಷದ ಮುಖ್ಯಮಂತ್ರಿ ಆಯ್ಕೆ ಎಂದು ಘೋಷಿಸಿದರು.
ಚರಂಜಿತ್ ಸಿಂಗ್ ಚನ್ನಿ ಮತ್ತು ನವಜೋತ್ ಸಿಂಗ್ ಸಿಧು ಅವರು ಪಕ್ಷದ ಸಿಎಂ ಮುಖವಾಗಲು ಪ್ರಮುಖ ಸ್ಪರ್ಧಿಗಳಾಗಿದ್ದರು. ಆದರೆ ಯಾರನ್ನು ಆಯ್ಕೆ ಮಾಡಿದರೂ ಅವರು ನಿರ್ಧಾರಕ್ಕೆ ಬೆಂಬಲವಾಗಿ ನಿಲ್ಲುತ್ತಾರೆ ಎಂದು ಇಬ್ಬರೂ ರಾಹುಲ್ ಗಾಂಧಿಗೆ ಭರವಸೆ ನೀಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!