ಬಂದೂಕು ಸಂಸ್ಕೃತಿಗೆ ಕಡಿವಾಣ ಹಾಕಲು ಮುಂದಾದ ಪಂಜಾಬ್‌ ಸರಕಾರ: ಹಿಂಸೆ ವೈಭವೀಕರಿಸುವ ಹಾಡುಗಳು ಬ್ಯಾನ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪಂಜಾಬ್ ನಲ್ಲಿ ಬಂದೂಕು ಸಂಸ್ಕೃತಿಗೆ ಕಡಿವಾಣ ಹಾಕಲು ರಾಜ್ಯ ಸರಕಾರ ಮುಂದಾಗಿದ್ದು, ಶಸ್ತ್ರಾಸ್ತ್ರ (Arms)ನಿಯಂತ್ರಣವನ್ನು ಬಿಗಿಗೊಳಿಸಿದೆ.

ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಸಾರ್ವಜನಿಕ ಶಸ್ತ್ರಾಸ್ತ್ರಗಳ ಪ್ರದರ್ಶನವನ್ನು ನಿಷೇಧಿಸುವುದು ಸೇರಿದಂತೆ ಗನ್ ಮಾಲೀಕತ್ವ ಮತ್ತು ಪ್ರದರ್ಶನಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ. ಇದರ ಜೊತೆಗೆ ಶಸ್ತ್ರಾಸ್ತ್ರಗಳು ಅಥವಾ ಹಿಂಸೆಯನ್ನು ವೈಭವೀಕರಿಸುವ ಹಾಡುಗಳನ್ನು ಕೂಡಾ ನಿಷೇಧಿಸಲಾಗಿದೆ.

ಇನ್ಮುಂದೆ ಎಲ್ಲಾ ಶಸ್ತ್ರಾಸ್ತ್ರ ಪರವಾನಗಿಗಳನ್ನು ಮುಂದಿನ 3 ತಿಂಗಳೊಳಗೆ ಕೂಲಂಕುಷವಾಗಿ ಪರಿಶೀಲಿಸಲಾಗುವುದು. ಪರವಾನಗಿದಾರರಲ್ಲಿ ಶಸ್ತ್ರಾಸ್ತ್ರ ಹೊಂದಿರಲು ಜಿಲ್ಲಾಧಿಕಾರಿಗಳಿಗೆ ತೃಪ್ತಿದಾಯಕ ಕಾರಣಗಳು ಸಿಗಲಿಲ್ಲವೆಂದಾದರೆ ಹೊಸ ಪರವಾನಗಿಯನ್ನು ನೀಡಲಾಗುವುದಿಲ್ಲ ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.

ಅದೇ ರೀತಿ ಜೀವನಕ್ಕೆ, ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಶಸ್ತ್ರಾಸ್ತ್ರಗಳನ್ನು ಬಳಕೆ ಮಾಡುವುದು ಅಥವಾ ಸಂಭ್ರಮಾಚರಣೆಯ ವೇಳೆ ಗುಂಡು ಹಾರಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಉಲ್ಲಂಘಿಸುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗುತ್ತದೆ.

ಈ ಹಿಂದೆಯೇ ಸಿಎಂ ಭಗವಾನ್ ಮೇ ತಿಂಗಳಿನಲ್ಲಿ ಹಾಡುಗಳ ಮೂಲಕ ಶಸ್ತ್ರಾಸ್ತ್ರಗಳನ್ನು ಅಥವಾ ಹಿಂಸೆಯನ್ನು ವೈಭವೀಕರಿಸುವ ಗಾಯಕರಿಗೆ ಎಚ್ಚರಿಕೆ ನೀಡಿದ್ದರು. .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!