ಪ್ರಧಾನಿ ಮೋದಿ ಭದ್ರತೆಯಲ್ಲಿ ಪಂಜಾಬ್ ಸರ್ಕಾರದ ನಿರ್ಲಕ್ಷ್ಯ: ವಿಜಯಪುರದಲ್ಲಿ ಪಂಜಿನ ಪ್ರತಿಭಟನೆ

ಹೊಸದಿಗಂತ ವರದಿ, ವಿಜಯಪುರ:

ಪ್ರಧಾನಿ ನರೇಂದ್ರ ಮೋದಿ ಭದ್ರತೆಯಲ್ಲಿನ ಪಂಜಾಬ್ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ನಗರದ ಶಿವಾಜಿ ವೃತ್ತದಲ್ಲಿ ಬಿಜೆಪಿ ಜಿಲ್ಲಾ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿ, ಪ್ರತಿಭಟಿಸಿದರು.
ಪ್ರತಿಭಟನಾಕಾರರು, ಪಂಜಾಬ್ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೇ, ದೇಶದಲ್ಲಿ ಕಾಂಗ್ರೆಸ್ ಪಕ್ಷದವರು ಗೂಂಡಾವರ್ತನೆ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಕಿಡಿಕಾರಿದರು. ಇನ್ನು ತಕ್ಷಣವೇ ಪಂಜಾಬ್ ಸರ್ಕಾರ ಪ್ರಧಾನಿ ಮೋದಿ ಅವರಿಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!