ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಬರೋಬ್ಬರಿ 11 ವರ್ಷಗಳ ಬಳಿಕ ಪಂಜಾಬ್ ಕಿಂಗ್ಸ್ ಪ್ಲೇಆಫ್ ಪ್ರವೇಶಿಸಿದೆ. ಇದಕ್ಕೂ ಮುನ್ನ ಪಂಜಾಬ್ ಪಡೆ ಪ್ಲೇಆಫ್ ಆಡಿದ್ದು 2014 ರಲ್ಲಿ. ಇದಾದ ಬಳಿಕ ಒಮ್ಮೆಯೂ ಟಾಪ್-4 ನಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿರಲಿಲ್ಲ.
ಆದರೆ ಈ ಬಾರಿ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಕಣಕ್ಕಿಳಿದಿರುವ ಪಂಜಾಬ್ ಕಿಂಗ್ಸ್ ಲೀಗ್ ಹಂತದ ಪಂದ್ಯಗಳ ಮುಕ್ತಾಯಕ್ಕೂ ಮುನ್ನವೇ ಪ್ಲೇಆಫ್ನಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಂಡಿದೆ.
ಇದರೊಂದಿಗೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಮೂರು ತಂಡಗಳನ್ನು ಪ್ಲೇಆಫ್ಗೇರಿಸಿದ ಮೊದಲ ನಾಯಕ ಎಂಬ ದಾಖಲೆಯೊಂದು ಶ್ರೇಯಸ್ ಅಯ್ಯರ್ ಪಾಲಾಗಿದೆ. ಐಪಿಎಲ್ನಲ್ಲಿ ಶ್ರೇಯಸ್ ಅಯ್ಯರ್ ಈವರೆಗೆ ಮೂರು ತಂಡಗಳನ್ನು ಮುನ್ನಡೆಸಿದ್ದಾರೆ.