ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್ ಕಿಂಗ್ಸ್ (PBKS) ಈ ಬಾರಿ ಕೇವಲ ಇಬ್ಬರು ಆಟಗಾರರನ್ನು ಮಾತ್ರ ಉಳಿಸಿಕೊಂಡಿದೆ.
ಶಶಾಂಕ್ ಸಿಂಗ್ ಅವರನ್ನು 5.5 ಕೋಟಿ ರೂ.ಗೆ ಹಾಗೂ ಆರಂಭಿಕ ಆಟಗಾರ ಪ್ರಭ್ಸಿಮ್ರನ್ ಸಿಂಗ್ ಅವರನ್ನು 4 ಕೋಟಿ ರೂ.ಗೆ ಧಾರಣೆ ಮಾಡಿಕೊಂಡಿದೆ. ಉಳಿದೆಲ್ಲ ಸ್ಟಾರ್ ಆಟಗಾರರನ್ನ ಹೊರದಬ್ಬಿದೆ. ಇದರಿಂದ ಪರ್ಸ್ನಲ್ಲಿ 110 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ.
ದಾಖಲೆ ಬೆಲೆಯ ಆಟಗಾರ ಔಟ್:
2023ರ ಐಪಿಎಲ್ಗೆ ನಡೆದ ಮಿನಿ ಹರಾಜಿನಲ್ಲಿ ಪಂಜಾಬ್ ಕಿಂಗ್ಸ್ ಆವೃತ್ತಿಗೆ 18.50 ಕೋಟಿ ರೂ.ಗೆ ಬಿಕರಿಯಾಗಿದ್ದ ಆಲ್ರೌಂಡರ್ ಸ್ಯಾಮ್ ಕರ್ರನ್ ರಿಟೇನ್ ಪಟ್ಟಿಯಲ್ಲಿ ಸ್ಥಾನ ಪಡೆದುಕೊಳ್ಳಲು ವಿಫಲರಾಗಿದ್ದಾರೆ.
2025 ರಿಂದ 2027ರ ಐಪಿಎಲ್ ಆವೃತ್ತಿಗಳಿಗೆ ಹೊಸ ನಿಯಮ ಘೋಷಣೆ ಮಾಡಿರುವ ಬಿಸಿಸಿಐ, ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ರಿಯಾದ್ನಲ್ಲಿ ಮೆಗಾ ಹರಾಜು ನಡೆಸಲು ತೀರ್ಮಾನಿಸಿದೆ.