ಈ ವರ್ಷದ ಅಭಿಯಾನ ಮುಗಿಸಿದ ಪಂಜಾಬ್​: ಹೈದರಾಬಾದ್​​ಗೆ 4 ವಿಕೆಟ್​ ಜಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಭಿಷೇಕ್​​ ಶರ್ಮ(66) ಬಾರಿಸಿದ ಸೊಗಸಾದ ಅರ್ಧಶತಕದ ನೆರವಿನಿಂದ ಸನ್​ರೈರ್ಸ್​ ಹೈದರಾಬಾದ್​(PBKS vs SRH) ತಂಡ ತವರಿನಲ್ಲೇ ನಡೆದ ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್​ ವಿರುದ್ಧ 4 ವಿಕೆಟ್ ಅಂತರದ ಗೆಲುವು ಸಾಧಿಸಿದೆ.​

ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು.

ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು.ಹೈದರಾಬಾದ್​ ತಂಡ ಸ್ಫೋಟಕ ಬ್ಯಾಟಿಂಗ್​ಗೆ ಹೆಸರುವಾಸಿಯಾದ ಟ್ರಾವಿಸ್​ ಹೆಟ್​​ ಅವರನ್ನು ಮೊದಲ ಎಸೆತದಲ್ಲೇ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಯಿತು. ಹೆಡ್​​ ಅವರು ಅರ್ಶದೀಪ್​ ಸಿಂಗ್​ ಅವರ ಮೊದಲ ಎಸೆತಲ್ಲೇ ಕ್ಲೀನ್​ ಬೌಲ್ಡ್​ ಆದರು. ಅಭಿಷೇಕ್​ ಶರ್ಮ ಬಿರುಸಿನ ಬ್ಯಾಟಿಂಗ್​ ಮೂಲಕ ಪಂಜಾಬ್​ ಬೌಲರ್​ಗಳ ಮೇಲೆರಗಿ ಸತತ ಸಿಕ್ಸರ್ ಮತ್ತು ಬೌಂಡರಿ ಬಾರಿಸಿ ತಮ್ಮ ಹಾಗೂ ತಂಡದ ಮೊತ್ತವನ್ನು ಹಿಗ್ಗಿಸಿದರು.

​ಅಭಿಷೇಕ್ ಶರ್ಮ ಅವರಿಗೆ ಮತ್ತೊಂದು ತುದಿಯಲ್ಲಿ ರಾಹುಲ್​ ತ್ರಿಪಾಠಿ ಕೂಡ ಉತ್ತಮ ಸಾಥ್​ ನೀಡಿದರು. ಉಭಯ ಆಟಗಾರರು ಸೇರಿಕೊಂಡು ದ್ವಿತೀಯ ವಿಕೆಟ್​ಗೆ 72 ರನ್​ ಬಾರಿಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಈತಿಪಾಠಿ 18 ಎಸೆತ ಎದುರಿಸಿ 33(4 ಬೌಂಡರಿ, 2 ಸಿಕ್ಸರ್​) ಬಾರಿಸಿದರು.

ಮೂರನೇ ವಿಕೆಟ್​ಗೂ ಅಭಿಷೇಕ್​, ನಿತೀಶ್​ ರೆಡ್ಡಿ ಜತೆಗೂಡಿ ಮತ್ತೊಂದು ಅರ್ಧಶತಕದ ಜತೆಯಾಟ ನಡೆಸಿ ಗಮನಸೆಳೆದರು. ಸಿಕ್ಸರ್​ಗಳ ಸುರಿಮಳೆ ಸುರಿಸಿದ ಅಭಿಷೇಕ್​ ಈ ಬಾರಿಯ ಟೂರ್ನಿಯಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರನಾಗಿ ಹೊರಮೊಮ್ಮಿದರು. ಒಟ್ಟು 28 ಎಸೆತ ಎದುರಿಸಿದ ಅಭಿಷೇಕ್​ ಬರೋಬ್ಬರಿ 6 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಸಿ 66 ರನ್​ ಬಾರಿಸಿದರು. 51 ಎಸೆತಗಳಲ್ಲಿ ಅರ್ಧಶತಕ ಪೂರ್ತಿಗೊಳಿಸಿದರು.

ಅಭಿಷೇಕ್​ ವಿಕೆಟ್​ ಪತನದ ಬಳಿಕ ಉತ್ತಮವಾಗಿ ಆಡುತ್ತಿದ್ದ ನಿತೀಶ್​ ರೆಡ್ಡಿ 37 ರನ್​ಗೆ ವಿಕೆಟ್​ ಕಳೆದುಕೊಂಡರು. ಬಳಿಕ ಬಂದ ಶಾಬಾಜ್​ ಅಹ್ಮದ್​ 3 ರನ್​ಗೆ ವಿಕೆಟ್​ ಕೈಚೆಲ್ಲಿದರು. ಈ ವೇಳೆ ಹೈದರಾಬಾದ್​ ಕೊಂಚ ಆತಂಕಕ್ಕೆ ಸಿಲುಕಿತು. ಇದೇ ವೇಳೆ ಹೆನ್ರಿಚ್​ ಕ್ಲಾಸೆನ್​ ಜವಾಬ್ದಾರಿಯು ಬ್ಯಾಟಿಂಗ್​ ನಡೆಸಿ 42 ರನ್​ ಬಾರಿಸಿದರು. ಅಂತಿಮವಾಗಿ ಅಬ್ದುಲ್​ ಸಮದ್​(11*) ಮತ್ತು ಸನ್ವೀರ್ ಸಿಂಗ್(6*) ಅಜೇಯ ರನ್​ ಬಾರಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!