ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 184 ರನ್ಗಳಿಸಿತ್ತು. 185 ರನ್‌ಗಳ ಗುರಿ ಬೆನ್ನಟ್ಟಿದ ಪಂಜಾಬ್ ತಂಡ 18.3 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.
ಪ್ಲೇಆಫ್ ಸುತ್ತಿನಲ್ಲಿ ಟಾಪ್ 2 ಸ್ಥಾನ ಪಡೆಯಲು ಉಭಯ ತಂಡಗಳಿಗೆ ಈ ಪಂದ್ಯ ಅತ್ಯಂತ ಮಹತ್ವದಾಗಿತ್ತು. ಅದರಂತೆ ಈ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿದ ಪಂಜಾಬ್ ಕಿಂಗ್ಸ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುವ ಮೂಲಕ ಕ್ವಾಲಿಫೈಯರ್ 1 ಆಡಲು ಅರ್ಹತೆ ಪಡೆದುಕೊಂಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡ 20 ಓವರ್‌ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿತು. ತಂಡದ ಪರ ಸ್ಟಾರ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ 57 ರನ್‌ಗಳ ಅತ್ಯಧಿಕ ಇನ್ನಿಂಗ್ಸ್ ಆಡಿದರು. ಮಾರ್ಕೊ ಯಾನ್ಸೆನ್ ಎಸೆತದಲ್ಲಿ ರಿಕಲ್ಟನ್ 20 ಎಸೆತಗಳಲ್ಲಿ 27 ರನ್ ಗಳಿಸಿ ಕ್ಯಾಚ್ ನೀಡಿ ಔಟಾದರು. ರೋಹಿತ್ ಶರ್ಮಾ ಕೂಡ 21 ಎಸೆತಗಳಲ್ಲಿ ಎರಡು ಬೌಂಡರಿ ಮತ್ತು ಒಂದು ಸಿಕ್ಸರ್ ನೆರವಿನಿಂದ 24 ರನ್ ಗಳಿಸಿ ಔಟಾದರು.
185ರನ್‌ಗಳ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಕೇವಲ 34 ರನ್ಗಳಾಗುವಷ್ಟರಲ್ಲಿ ಇನ್ಫಾರ್ಮ್ ಬ್ಯಾಟರ್ ಪ್ರಭಸಿಮ್ರನ್ ಸಿಂಗ್ ವಿಕೆಟ್ ಕಳೆದುಕೊಂಡಿತು. ಸಿಂಗ್ 16 ಎಸೆತಗಳಲ್ಲಿ ತಲಾ 1 ಬೌಂಡರಿ, ಸಿಕ್ಸರ್ ಸಹಿತ 13 ರನ್ಗಳಿಸಿ ಔಟ್ ಆದರು. ಆದರೆ 2ನೇ ವಿಕೆಟ್ಗೆ ಒಂದಾದ ಪ್ರಿಯಾಂಶ್ ಆರ್ಯ ಹಾಗೂ ಜೋಶ್ ಇಂಗ್ಲಿಸ್ 59 ಎಸೆತಗಳಲ್ಲಿ 109 ರನ್‌ಗಳ ಮ್ಯಾಚ್ ವಿನ್ನಿಂಗ್ ಜೊತೆಯಾಟ ನಡೆಸಿದರು. ಪ್ರಿಯಾಂಶ್ ಆರ್ಯ 35 ಎಸೆತಗಳಲ್ಲಿ 9 ಬೌಂಡರಿ, 2 ಸಿಕ್ಸರ್ ಸಹಿತ 62 ರನ್ಗಳಿಸಿ ಔಟ್ ಆದರು.
ಸ್ಫೋಟಕ ಬ್ಯಾಟಿಂಗ್ ಮಾಡಿದ ಜೋಸ್ ಇಂಗ್ಲಿಸ್ 42 ಎಸೆತಗಳಲ್ಲಿ 9 ಬೌಂಡರಿ, 3 ಸಿಕ್ಸರ್ಗಳ ಸಹಿತ 73 ರನ್ಗಳಿಸಿ ಗೆಲುವಿಗೆ 14 ರನ್‌ಗಳ ಅಗತ್ಯವಿದ್ದಾಗ ವಿಕೆಟ್ ಒಪ್ಪಿಸಿದರು. ನಾಯಕ ಶ್ರೇಯಸ್ ಅಯ್ಯರ್ 16 ಎಸೆತಗಳಲ್ಲಿ 1 ಬೌಂಡರಿ, 2 ಸಿಕ್ಸರ್ಗಳ ಸಹಿತ 26 ರನ್ಗಳಿಸಿ ತಂಡವನ್ನ ಗೆಲುವಿನ ಗಡಿ ದಾಟಿಸಿದರು.