ಗಿಲ್ ಜೊತೆ ಸೇರಿಕೊಂಡಿತು ಪಂಜಾಬಿ ನಟಿ ಹೆಸರು: ಈ ಕುರಿತು ಸೋನಮ್ ಬಾಜ್ವಾ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟೀಮ್ ಇಂಡಿಯಾ ಕ್ರಿಕೆಟಿಗ ಶುಭಮನ್ ಗಿಲ್ ಇಂದು ತಮ್ಮ ಬ್ಯಾಟಿಂಗ್ ಮೂಲಕ ದೇಶದೆಲ್ಲೆಡೆ ಸುದ್ದಿಯಲ್ಲಿದ್ದು, ಇದರ ನಡುವೆ ತಮ್ಮ ವೈಯಕ್ತಿಕ ಜೀವನದ ವಿಚಾರದಲ್ಲೂ ಸುದ್ದಿಯಲ್ಲಿದ್ದಾರೆ.

ಅದೇನೆಂದರೆ ಆತನ ಡೇಟಿಂಗ್ (Dating) ವಿಚಾರ. ಗಿಲ್ ಜೊತೆ ದಿನಕ್ಕೊಂದು ಹುಡುಗಿಯ ಹೆಸರು ತಳುಕು ಹಾಕಿಕೊಳ್ಳುತ್ತಿದೆ. ಶುಭಮನ್ ಯಾರ ಜೊತೆ ಡೇಟಿಂಗ್ ಮಾಡುತ್ತಿದ್ದಾನೋ ಗೊತ್ತಿಲ್ಲ. ಆದರೆ, ಹೊಸ ಹೊಸ ಹುಡುಗಿಯರ ಹೆಸರು ಮಾತ್ರ ಕೇಳಿ ಬರುತ್ತಲೇ ಇದೆ.

ಮೊನ್ನೆಯಷ್ಟೇ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ (Sara Tendulkar) ಜೊತೆ ಗಿಲ್ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಹೇಳಲಾಗಿತ್ತು. ಅದಕ್ಕೆ ಪೂರಕ ಎನ್ನುವಂತೆ ಈ ಇಬ್ಬರೂ ಸುತ್ತಾಡುವ ಫೋಟೋಗಳು ಕಂಡು ಬಂದವು. ಅದಾದ ಬಳಿಕ ಸಾರಾ ಅಲಿ ಖಾನ್ ಜೊತೆಗೂ ಹೆಸರು ತುಣುಕು ಹಾಕಿಕೊಂಡಿತ್ತು.

ಇದೀಗ ಗಿಲ್ ಜೊತೆ ಮತ್ತೋರ್ವ ಹುಡುಗಿಯ ಹೆಸರು ಕೇಳಿ ಬಂದಿದೆ. ಪಂಜಾಬಿ ನಟಿ ಸೋನಮ್ ಬಾಜ್ವಾ (Sonam Bajwa) ಜೊತೆ ಕ್ರಿಕೆಟಿಗ ಗಿಲ್ ಲವ್ವಿಡವ್ವಿ ಶುರು ಮಾಡಿದ್ದಾರಂತೆ. ಅದಕ್ಕೆ ಸಾಕ್ಷಿ ಎನ್ನುವಂತೆ ಇವರಿಬ್ಬರ ಫೋಟೋಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ಸಿಗುತ್ತಿವೆ. ಇಬ್ಬರೂ ಒಟ್ಟಿಗೆ ಇರುವ ಫೋಟೋಗಳು ಆಚೆ ಬರುತ್ತಿದೆ.

ಇದೀಗ ಸೋನಮ್ ಪ್ರತಿಕ್ರಿಯೆಯನ್ನೂ ಕೊಟ್ಟಿದ್ದು, ಯಾವುದೇ ಕಾರಣಕ್ಕೂ ಗಿಲ್ ಜೊತೆ ನಾನು ಡೇಟಿಂಗ್ ಮಾಡುತ್ತಿಲ್ಲ. ಸುಖಾಸುಮ್ಮನೆ ರೂಮರ್ ಹಬ್ಬಿಸಬೇಡಿ ಎಂದು ಅವರು ಕೇಳಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!