August 31, 2026
Monday, August 31, 2026
spot_img

ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಪುಣ್ಯೇಶ್‌ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಾಜಿನಗರ ಪೊಲೀಸರು ಪ್ರಮುಖ ಆರೋಪಿ ಪುಣ್ಯೇಶ್‌ನನ್ನು ಅರೆಸ್ಟ್‌ ಮಾಡಿದ್ದಾರೆ.

ಪ್ರಾಥಮಿಕ ವಿಚಾರಣೆಯಲ್ಲಿ, ಆರೋಪಿ ಒಂದು ಬಾಕ್ಸ್‌ನಲ್ಲಿ ಮೊಟ್ಟೆಗಳನ್ನು ತಂದು ಬಿಜೆಪಿ ನಾಯಕರಿಗಾಗಿ ಕಾಯುತ್ತಿರುವುದು ಗೊತ್ತಾಗಿದೆ. ಈ ಕೃತ್ಯದ ಹಿಂದೆ ಇನ್ನೂ ಕೆಲವರು ಇದ್ದಾರೆಯೇ ಎಂಬ ಅನುಮಾನವೂ ಪೊಲೀಸರಿಗೆ ಮೂಡಿದ್ದು, ಆ ದಿಕ್ಕಿನಲ್ಲೂ ತನಿಖೆ ಮುಂದುವರಿದಿದೆ.

ಮೊಟ್ಟೆಗಳನ್ನು ಎಲ್ಲಿಂದ ತಂದಿದ್ದ, ಘಟನೆ ಪೂರ್ವನಿಯೋಜಿತವಾಗಿತ್ತೇ, ಮೊಟ್ಟೆ ಎಸೆಯಲು ಯಾರಾದರೂ ಸೂಚನೆ ನೀಡಿದ್ದರೇ ಹಾಗೂ ಪುಣ್ಯೇಶ್ ಜೊತೆಗೆ ಇದ್ದವರು ಯಾರು ಎಂಬ ಬಗ್ಗೆ ಪೊಲೀಸರು ತಡರಾತ್ರಿವರೆಗೂ ವಿಚಾರಣೆ ನಡೆಸಿದ್ದಾರೆ.

ಇಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಅಗತ್ಯ ಕ್ರಮ ಕೈಗೊಳ್ಳಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !