ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, June 25, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಶಾಸಕರ ನಿಧಿಯಿಂದ ಸರ್ಕಾರಿ ಆಸ್ಪತ್ರೆಗೆ 72 ಆಮ್ಲಜನಕ ಸಾಂದ್ರಕ ಖರೀದಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….

ಹೊಸ ದಿಗಂತ ವರದಿ, ಕೋಲಾರ:

ಕೋಲಾರ ಸೇರಿದಂತೆ ಆಗ್ನೇಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಐದು ಜಿಲ್ಲೆಗಳ ಸರ್ಕಾರಿ ಆಸ್ಪತ್ರೆಗಳಿಗೆ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯ ಮೂಲಕ ತಲಾ 5 ಲೀಟರ್ ಸಾಮರ್ಥ್ಯದ 72 ಆಮ್ಲಜನಕ ಸಾಂದ್ರಕಗಳನ್ನು ಒದಗಿಸುವ ಮೂಲಕ ಇವುಗಳನ್ನು ಕೋವಿಡ್ ಸೋಂಕಿಗೆ ತುತ್ತಾದ ಶಿಕ್ಷಕರು,ಉಪನ್ಯಾಸಕರಿಗೆ ಆದ್ಯತೆ ಮೇರೆಗೆ ಬಳಸುವಂತೆ ವಿಧಾನಪರಿಷತ್ ಶಾಸಕ ಡಾ.ವೈ.ಎ.ನಾರಾಯಣಸ್ವಾಮಿ ಕೋರಿದ್ದಾರೆ.
ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಅವರು, ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಪ್ರತಿ ಕ್ಷೇತ್ರಕ್ಕೆ ತಲಾ 2 ಕೋಟಿ ರೂ. ಅನುದಾನವನ್ನು ಒದಗಿಸುತ್ತಿದ್ದು, ಅದರಲ್ಲಿ 2020-21ನೇ ಸಾಲಿನಲ್ಲಿ ಬಿಡುಗಡೆಯಾಗಿರುವ ಅನುದಾನಕ್ಕೆ ಕ್ರಿಯಾಯೋಜನೆ ರೂಪಿಸುವಾಗ ಈ ಹಣದಲ್ಲಿ ಶೇ.25 ರಷ್ಟನ್ನು ಕೋವಿಡ್ ಸಂಬಂಧಿತ ಆಸ್ಪತ್ರೆಗಳ ಸುಧಾರಣೆಗೆ ಬಳಸಿಕೊಳ್ಳಲು ಕೋರಿದ್ದಾರೆ.
ಈ ಹಣದ 50.40 ಲಕ್ಷ ವೆಚ್ಚದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಐದು ಜಿಲ್ಲೆಗಳ ತಮ್ಮ ಮತ ಕ್ಷೇತ್ರ ವ್ಯಾಪ್ತಿಯ ಜಿಲ್ಲಾ,ತಾಲ್ಲೂಕು ಸರ್ಕಾರಿ ಆಸ್ಪತ್ರೆಗಳಿಗೆ ತಲಾ 5 ಲೀ.ಸಾಮರ್ಥ್ಯದ 70 ಸಾವಿರ ರೂ ಘಟಕ ವೆಚ್ಚದಲ್ಲಿ ಆಕ್ಸಿಜನ್ ಕಾನ್ಸರ್‌ಟ್ರೇಟರ್‌ಗಳನ್ನು ಅಳವಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಅದರಂತೆ ಕೋಲಾರ ಜಿಲ್ಲೆಗೆ 14 ಕಾನ್ಸರ್‌ಟ್ರೇಟರ್‌ಗಳು, ಚಿಕ್ಕಬಳ್ಳಾಪುರ ಜಿಲ್ಲೆಗೆ 12, ತುಮಕೂರು ಜಿಲ್ಲೆಗೆ 22, ಚಿತ್ರದುರ್ಗ ಜಿಲ್ಲೆಗೆ 14 ಹಾಗೂ ದಾವಣಗೆರೆ ಜಿಲ್ಲೆಗೆ 10 ಕಾನ್ಸರ್‌ಟ್ರೇಟರ್‌ಗಳನ್ನು ಒದಗಿಸುವಂತೆ ಅವರ ಪತ್ರದಲ್ಲಿ ಡಿಸಿಯವರಿಗೆ ವಿನಂತಿಸಿದ್ದಾರೆ.
ತಮ್ಮ ಅನುದಾನದಲ್ಲಿ ಖರೀದಿಸುತ್ತಿರುವ ಆಕ್ಸಿಜನ್ ಕಾನ್ಸರ್‌ಟ್ರೇಟರ್‌ಗಳನ್ನು ಕೋಲಾರ ಜಿಲ್ಲಾ ಎಸ್‌ಎನ್‌ಆರ್ ಆಸ್ಪತ್ರೆಗೆ 4 ಹಾಗೂ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಿಗೆ ತಲಾ 2 ಕಾನ್ಸರ್‌ಟ್ರೇಟರ್‌ಗಳನ್ನು ಒದಗಿಸುವಂತೆ ಪತ್ರದಲ್ಲಿ ವೈ.ಎ.ನಾರಾಯಣಸ್ವಾಮಿ ಸೂಚಿಸಿದ್ದಾರೆ.
ಅದೇ ರೀತಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜಿಲ್ಲಾ ಮತ್ತು ಎಲ್ಲಾ ತಾಲ್ಲೂಕು ಆಸ್ಪತ್ರೆಗಳಿಗೆ ತಲಾ 2 ಕಾನ್ಸರ್‌ಟ್ರೇಟರ್‌ಗಳನ್ನು ಒದಗಿಸಲು ಸೂಚಿಸಿರುವ ಅವರು, ತುಮಕೂರು ಜಿಲ್ಲೆಯ ಜಿಲ್ಲಾಸ್ಪತ್ರೆಗೆ 4 ಮತ್ತು ಉಳಿದಂತೆ ಅಲ್ಲಿನ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಿಗೆ ತಲಾ 2 ಕಾನ್ಸರ್‌ಟ್ರೇಟರ್‌ಗಳನ್ನು ಒದಗಿಸಲು ಸೂಚಿಸಿದ್ದಾರೆ.
ಹಾಗೆಯೇ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ 4 ಹಾಗೂ ಅಲ್ಲಿನ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಿಗೆ ತಲಾ 2 ಕಾನ್ಸರ್‌ಟ್ರೇಟರ್‌ಗಳು, ದಾವಣಗೆರೆ ಜಿಲ್ಲೆಯಲ್ಲಿ ಜಿಲ್ಲಾಸ್ಪತ್ರೆಗೆ 4, ಜಗಳೂರು  ಮತ್ತು ಹರಿಹರದ ಪ್ರಾಥಮಿಕ ಆರೋಗ್ಯಕೇಂದ್ರಗಳಿಗೆ ತಲಾ 3 ಕಾನ್ಸರ್‌ಟ್ರೇಟರ್‌ಗಳನ್ನು ಒದಗಿಸಲು ಡಿಸಿಯವರಿಗೆ ಬರೆದಿರುವ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss