Monday, August 15, 2022

Latest Posts

ಖರೀದಿ ಸೋಗಿನಲ್ಲಿ ಚಿನ್ನಾಭರಣ ಕಳವು: ಮೂವರು ಮಹಿಳೆಯರ ಬಂಧನ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಪುತ್ತೂರು:

ಚಿನ್ನಾಭರಣ ಖರೀದಿಸುವ ಗ್ರಾಹಕರ ಸೋಗಿನಲ್ಲಿ ಪುತ್ತೂರು ಹಿಂದೂಸ್ತಾನ್  ಕಮರ್ಶಿಯಲ್ ಕಾಂಪ್ಲೆಕ್ಸ್ ನಲ್ಲಿರುವ ಜೋಸ್ ಆಲುಕ್ಕಾಸ್ ಗೆ ಸೆ.1 ರಂದು ಬಂದ ಮೂವರು ಮಹಿಳೆಯರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಪುತ್ತೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ದಾವಣಗೆರೆ ಜಿಲ್ಲೆ ನಿವಾಸಿಗಳಾದ ಬೀಬಿಜಾನ್ , ಹುಸೇನ್ ಬಿ., ಜೈತುಂಬಿ ಬಂಧಿತ ಆರೋಪಿಗಳು. ಇವರು ಸೆ.1 ರಂದು ಜೋಸ್ ಅಲುಕ್ಕಾಸ್ ಗೆ ಬಂದು 3.065 ಗ್ರಾಂ ತೂಕದ ರೂ. 13,400 ಮೌಲ್ಯದ ಚಿನ್ನವನ್ನು ಇರಿಸಿ ಆರೋಪಿಗಳು ಸುಳ್ಳು ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ನೀಡಿ  ಗ್ರಾಹಕರ ಸೋಗಿನಲ್ಲಿ ಚಿನ್ನದ ಅಂಗಡಿಗೆ ಸುಮಾರು 50.242 ಗ್ರಾಂ ತೂಕದ ರೂ. 2,60,400 ಮೌಲ್ಯದ ಕಿವಿಯ ಚಿನ್ನಾಭರಣವನ್ನು ವಂಚಿಸಿ  ಕಳವು ಮಾಡಿಕೊಂಡು ಹೋಗಿದ್ದರು. ಈ ಕುರಿತು ಜೋಸ್ ಅಲುಕ್ಕಾಸ್ ಜ್ಯುವೆಲ್ಲರಿ ಮ್ಯಾನೇಜರ್ ರತೀಶ್ ಪೊಲೀಸರಿಗೆ ದೂರು ನೀಡಿದ್ದರು.‌
ಪ್ರಕರಣ ದಾಖಲಿಸಿಕೊಂಡ ಪೊಲೀಸರು  ಆರೋಪಿಗಳನ್ನು ಬೀರಮಲೆ ಗುಡ್ಡೆಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಕಳವು ಮಾಡಿದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ದ.ಕ. ಜಿಲ್ಲಾ ಎಸ್ಪಿ ಋಷಿಕೇಶ್ ಭಗವಾನ್ ಸೋನಾವನೆ ಅವರ ನಿರ್ದೇಶನದಂತೆ ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಹಾಗೂ ಪೊಲೀಸ್ ಉಪಾಧೀಕ್ಷಕಿ ಡಾ. ಗಾನ ಪಿ. ಕುಮಾರ್ ಮಾರ್ಗದರ್ಶನದಲ್ಲಿ ನಗರ ಪೊಲೀಸ್ ಠಾಣೆ ನಿರೀಕ್ಷಕ ಗೋಪಾಲ್ ನಾಯ್ಕ್ ನೇತೃತ್ವದಲ್ಲಿ  ಎಸ್.ಐ.ಗಳಾದ ಸುತೇಶ್ ಕೆ.ಪಿ. ನಸ್ರೀನಾ ತಾಜ್ ಚಟ್ಟರಕಿ,   ಮಹಿಳಾ ಎ.ಎಸ್.ಐ. ಕವಿತಾ ,  ಹೆಡ್ ಕಾನ್ ಸ್ಟೇಬಲ್  ರಕ್ಷಿತ್,  ರಾಜೇಶ್, ಕಾನ್ ಸ್ಟೇಬಲ್ ಗಳಾದ  ಕಿರಣ್, ಆನಂದ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.  ಆರೋಪಿಗಳನ್ನು ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss