ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, June 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಈ ವರ್ಷವೂ ಭಕ್ತರ ಅನುಪಸ್ಥಿತಿಯಲ್ಲಿ ನಡೆಯಲಿದೆ ಪುರಿ ಜಗನ್ನಾಥ ರಥಯಾತ್ರೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ಈ ವರ್ಷವೂ ಭಕ್ತರ ಅನುಪಸ್ಥಿತಿಯಲ್ಲಿ ನಿಗದಿಯಂತೆ ಜುಲೈ 12ರಂದು ನಡೆಯಲಿದೆ ಎಂದು ರಾಜ್ಯ ಸರ್ಕಾರ ಗುರುವಾರ ಪ್ರಕಟಿಸಿದೆ.
ಕೋವಿಡ್‌ ಮಾರ್ಗಸೂಚಿ ನಿಯಮಗಳ ಅನುಸಾರ ರಥಯಾತ್ರೆ ನಡೆಯಲಿದ್ದು, ಭಕ್ತರಿಗೆ ಪ್ರವೇಶ ಇರುವುದಿಲ್ಲ ಎಂದು ಸರ್ಕಾರ ಪ್ರಕಟಿಸಿದೆ.
ವಿಶೇಷ ಆಯುಕ್ತ (ಎಸ್‌ಆರ್‌ಸಿ) ಪಿ.ಕೆ.ಜೆನಾ ಅವರು, ಕಳೆದ ವರ್ಷ ಸುಪ್ರೀಂ ಕೋರ್ಟ್‌ ನೀಡಿದ್ದ ಎಲ್ಲ ಮಾರ್ಗಸೂಚಿಗಳ ಪರಿಧಿಯಲ್ಲಿಯೇ ಧಾರ್ಮಿಕ ವಿಧಿವಿಧಾನಗಳನ್ನು ಆಚರಿಸಲಿದ್ದೇವೆ ಎಂದು ತಿಳಿಸಿದರು.
ರಥಯಾತ್ರೆ ಅವಧಿಯಲ್ಲಿ ಕೋವಿಡ್ ನೆಗೆಟಿವ್‌ ಇರುವ, ಪೂರ್ಣವಾಗಿ ಲಸಿಕೆ ಪಡೆದಿರುವ ಆಯ್ದ ಕೆಲವರಿಗೆ ‘ಸ್ನಾನ ಪೂರ್ಣಿಮಾ’ ಹಾಗೂ ಇತರೆ ಆಚರಣೆಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಹೇಳಿದರು.
ರಥಯಾತ್ರೆಯ ದಿನ ಪುರಿ ನಗರದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗುವುದು. ಭಕ್ತರ ವೀಕ್ಷಣೆಗೆ ಅನುವಾಗುವಂತೆ ಟೆಲಿವಿಷನ್‌ ಮತ್ತು ವೆಬ್‌ಕಾಸ್ಟ್‌ ಮೂಲಕ ಪ್ರಸಾರಕ್ಕೆ ಕ್ರಮವಹಿಸಲಾಗುವುದು. ಒಂಭತ್ತು ದಿನ ನಡೆಯುವ ರಥ ಎಳೆಯುವ ಜಾತ್ರೆಗೆ ಕೇವಲ 500 ಜನರಿಗಷ್ಟೇ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss