ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಜುಲೈ 12ರಿಂದ ಪುರಿ ಜಗನ್ನಾಥ ರಥಯಾತ್ರೆ: ಭಕ್ತರ ಪ್ರವೇಶಕ್ಕೆ ಅವಕಾಶವಿಲ್ಲ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಜುಲೈ 12ರಿಂದ ಪುರಿ ಜಗನ್ನಾಥ ರಥಯಾತ್ರೆ ಆರಂಭವಾಗಲಿದ್ದು, ಮಾರ್ಗಸೂಚಿ ಪ್ರಕಟವಾಗಿದೆ.

ಎಸ್‌ಜೆಟಿಎ ನಿಯೋಗವು ಈ ಕುರಿತು ಸಭೆ ನಡೆಸಿ ನಿರ್ಧಾರವನ್ನು ಕೈಗೊಂಡಿದ್ದು, ಭಕ್ತರಿಗೆ ಅನುಮತಿ ನೀಡಿದರೆ ಕೋವಿಡ್ ಸೋಂಕು ಹೆಚ್ಚುವ ಸಾಧ್ಯತೆ ಇರುವ ಹಿನ್ನೆಲೆ ಭಕ್ತರಿಲ್ಲದೆ  ಕಾರ್ಯಕ್ರಮಗಳನ್ನು ನಡೆಸುವುದಾಗಿ ತಿಳಿಸಿದೆ.

ರಥಯಾತ್ರೆಯಲ್ಲಿ ಸೇವಕರು ಮತ್ತು ದೇವಾಲಯದ ಅಧಿಕಾರಿಗಳು ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ. ಯಾತ್ರೆಯಲ್ಲಿ ಭಾಗವಹಿಸುವವರೆಲ್ಲರೂ ಆರ್‌ಟಿಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು ಅಥವಾ ಎರಡು ಡೋಸ್ ಕೊರೋನಾ ಲಸಿಕೆ ಪಡೆದಿರಬೇಕು.

ಭಗವಾನ್ ಜಗನ್ನಾಥ, ಭಗವಾನ್ ಬಾಲಚಂದ್ರ, ದೇವಿ ಸುಭದ್ರಾ ದೇವತೆಗಳ ಸ್ನಾನ ಯಾತ್ರೆಯ ಸಂದರ್ಭದಲ್ಲಿ 144 ಸೆಕ್ಷನ್ ಜಾರಿಮಾಡಲಾಗುವುದು ಹಾಗೂ ದೇವಾಲಯದ ಮುಂಭಾಗದಲ್ಲಿರುವ ಗ್ರ್ಯಾಂಡ್ ರಸ್ತೆಯಲ್ಲಿ ಸಭೆ ಸೇರಲು ಯಾರಿಗೂ ಅವಕಾಶವಿರುವುದಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss