ಹೊಸದಿಗಂತ ಡಿಜಿಟಲ್ ಡೆಸ್ಕ್
ಕೊನೆಗೂ ಉತ್ತರಾಖಂಡದಲ್ಲಿ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಪುಷ್ಕರ್ ಸಿಂಗ್ ಧಮಿ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.
ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಧಾಮಿ ಸೋಲು ಕಂಡಿದ್ದರಿಂದ ನೂತನ ಸಿಎಂ ಆಯ್ಕೆಗೆ ಬಿಜೆಪಿ ಕಸರತ್ತು ನಡೆಸಿತ್ತು. ಹೊಸ ಮುಖಕ್ಕೆ ಬಿಜೆಪಿ ಹೈಕಮಾಂಡ್ ಮಣೆಹಾಕುತ್ತೆ ಎಂದು ಹೇಳಲಾಗುತ್ತಿತ್ತು. ಅಂತಿಮವಾಗಿ ಪುಷ್ಕರ್ ಸಿಂಗ್ ಧಮಿ ಅವರನ್ನು ಮುಂದಿನ ಮುಖ್ಯಮತ್ರಿಯಾಗಿ ಆಯ್ಕೆಮಾಡಲಾಗಿದೆ.
ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ, ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಮತ್ತು ಮೀನಾಕ್ಷಿ ಲೇಖಿ ಹಾಜರಿದ್ದರು.