ಹೊಸದಿಗಂತ ಡಿಜಿಟಲ್ ಡೆಸ್ಕ್:
‘ಪುಷ್ಪ 2’ ಸಿನಿಮಾ ನೋಡುವ ಸಮಯ ಕಾಲ್ತುಳಿತಕ್ಕೆ ಸಾವನ್ನಪ್ಪಿದ್ದ ಮಹಿಳೆ ಕುಟುಂಬಕ್ಕೆ ಮೈತ್ರಿ ಮೂವಿ ಮೇಕರ್ಸ್ ನೆರವು ನೀಡಿದೆ. ಘಟನೆಯಲ್ಲಿ ರೇವತಿ ಪ್ರಾಣ ಕಳೆದುಕೊಂಡರೆ, ಅವರ ಎಂಟು ವರ್ಷದ ಮಗ ಗಾಯಗೊಂಡಿದ್ದು, ಪ್ರಸ್ತುತ ನಗರದ ಖಾಸಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಸಂಧ್ಯಾ ಚಿತ್ರಮಂದಿರದಲ್ಲಿ ಕಾಲ್ತುಳಿತ ಸಂಭವಿಸಿ ಮೃತಪಟ್ಟವರ ಕುಟುಂಬಕ್ಕೆ ನಿರ್ಮಾಪಕ ನವೀನ್ ಯೆರ್ನೇನಿ 50 ಲಕ್ಷ ರೂ.ಗಳ ಚೆಕ್ ಹಸ್ತಾಂತರಿಸಿದ್ದಾರೆ.
ಅಲ್ಲು ಅರ್ಜುನ್ ಅವರು ತೇಜ್ ಕುಟುಂಬಕ್ಕೆ 25 ಲಕ್ಷ ರೂ.ಗಳ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದ್ದಾರೆ. ನಿರ್ದೇಶಕ ಸುಕುಮಾರ್ ಮತ್ತು ಅವರ ಪತ್ನಿ ತಬಿತಾ ಕೂಡ 5 ಲಕ್ಷ ರೂ.ಗಳನ್ನು ದೇಣಿಗೆ ನೀಡಿದ್ದು, ನಿರ್ಮಾಪಕರಾದ ಅಲ್ಲು ಅರವಿಂದ್ ಮತ್ತು ಬನ್ನಿ ವಾಸುಲು ಅವರು ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ.