ಹೊಸದಿಗಂತ ಡಿಜಿಟಲ್ ಡೆಸ್ಕ್
ಥಿಯೇಟರ್ ಗಳಲ್ಲಿ ಬಿಡುಗಡೆಯಾಗಿ ಕೋಟಿ ಕೋಟಿ ಹಣ ಬಾಚಿದ ಚಿತ್ರ ಪುಷ್ಪ. ನಿರ್ದೇಶಕ ಸುಕುಮಾರ್ ಆಕ್ಷನ್ ಕಟ್ ಹೇಳಿರುವ ಚಿತ್ರ ಈಗ ಒಟಿಟಿಯಲ್ಲಿ ಬಿಡುಗಡೆಯಾಗ್ತಿದೆ.
ಪುಷ್ಪ ಈಗ ಅಮೆಜಾನ್ ಪ್ರೈಮ್ ಮೂಲಕ ವಿಶ್ವದಾದ್ಯಂತ ಎಲ್ಲಾ ಭಾಷೆಗಳಲ್ಲೂ ಮತ್ತೆ ರಿಲೀಸ್ ಆಗಲಿದೆ. ಜ.7ರಂದು ಅಮೆಜಾನ್ ಪ್ರೈಮ್ ನಲ್ಲಿ ಚಿತ್ರ ರಿಲೀಸ್ ಆಗಲಿದ್ದು, ಮತ್ತಷ್ಟು ಹೆಚ್ಚಿನ ವೀಕ್ಷಣೆ ಪಡೆಯುವ ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್, ನಟಿ ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಹಿಂದಿ ಮಾರುಕಟ್ಟೆಯಲ್ಲಿ 55 ಕೋಟಿ ರೂ. ಗೂ ಹೆಚ್ಚು ಹಣ ಗಳಿಸಿದ ತಂಡ ಈಗ ಒಟಿಟಿಗೆ ಬರಲು ಸಜ್ಜಾಗಿದೆ.