ಹೊಸದಿಗಂತ ಡಿಜಿಟಲ್ ಡೆಸ್ಕ್:
ಫೆ.17ರಂದು ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣರ ಭಾವಚಿತ್ರ ಹಾಕಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣಗೊಳಿ ಮಾತನಾಡಿ, ಫೆ. 17 ರಂದು ಹಾಕುವ ಬಸವಣ್ಣನವರ ಫೋಟೊ ಕೆಳಗೆ ವಿಶ್ವ ಗುರು ಬಸವಣ್ಣ-ಸಾಂಸ್ಕೃತಿಕ ನಾಯಕ” ಎಂದು ನಮೂದಿಸಬೇಕು ಎಂದಿದ್ದಾರೆ.
ಬಸವಣ್ಣನವರ ಕಾರ್ಯಕ್ರಮಕ್ಕೆ ಸರ್ಕಾರದ ಬಳಿ ದುಡ್ಡಿಲ್ಲ ಎಂದು ಜಾತಿ ವಿಷಯವನ್ನು ತಗಲು ಹಾಕಿ ಕೆಲವರು ಮಾತನಾಡಿದ್ದಾರೆ. ಆದರೆ ಯಾರು ಯಾವ ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿರೋದಿಲ್ಲ ಇಷ್ಟಾದ್ರೂ ಗೊತ್ತಿರಲಿ ಎಂದಿದ್ದಾರೆ.