ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಕ್ಷದಲ್ಲಿ ಇತ್ತೀಚೆಗೆ ಉಲ್ಬಣಗೊಂಡಿರುವ ಆಂತರಿಕ ಸಂಘರ್ಷದ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ತಂಡಕ್ಕೆ ಬ್ರೇಕ್ ಹಾಕಿ ಎಂದು ಮನವಿ ಮಾಡಿದರು.
ವಿಜಯೇಂದ್ರ ಅವರು ಬುಧವಾರ ಅಮಿತ್ ಶಾ ಅವರನ್ನು ಭೇಟಿ ಮಾಡಿದರು. ಒಂದು ವರ್ಷದಿಂದ ರಾಜ್ಯದಲ್ಲಿ ಪಕ್ಷ ಸಂಘಟನೆ, ಹೋರಾಟ ಕುರಿತು ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ. ತಮ್ಮ ಒಂದು ವರ್ಷದ ಸಾಧನೆಯ ವರದಿ ಕೊಡುವ ಮೂಲಕ ಕುತೂಹಲ ಹುಟ್ಟಿಸಿದ್ದಾರೆ.
ಈ ವರ್ಷಾರಂಭದಿಂದ ಪಕ್ಷದ ವತಿಯಿಂದ ಕೈಗೊಳ್ಳಲಿರುವ ಹೋರಾಟಗಳ ಬಗ್ಗೆ ಪ್ರತ್ಯೇಕ ವರದಿ ಕೂಡ ಸಲ್ಲಿಸಿದ್ದಾರೆ. ಸಚಿನ್ ಆತ್ಮಹತ್ಯೆ ಪ್ರಕರಣಕ್ಕೂ ಪ್ರಿಯಾಂಕ್ ಖರ್ಗೆಗೂ ಸಂಬಂಧ ಇರುವ ಬಗ್ಗೆ ಕೂಡ ಮಾಹಿತಿ ನೀಡಿದ್ದಾರೆ.