ಹೊಸದಿಗಂತ ಡಿಜಿಟಲ್ ಡೆಸ್ಕ್:
ಐ-ಪ್ಯಾಕ್ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸ ಮತ್ತು ಕಚೇರಿ ಜಾರಿ ನಿರ್ದೇಶನಾಲಯ(ಇಡಿ) ನಡೆಸಿದ ದಾಳಿಯನ್ನು ಖಂಡಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಬೀದಿಗಿಳಿದು ಪ್ರತಿಭಟನಾ ಮೆರವಣಿಗೆ ನಡೆಸಿದರು.
ತೃಣಮೂಲ ಕಾಂಗ್ರೆಸ್(ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಕೋಲ್ಕತ್ತಾದ 8 ಬಿಬಸ್ ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿದ್ದು, ಪಕ್ಷದ ಹಿರಿಯ ನಾಯಕರು, ಸಚಿವರು, ಸಂಸದರು, ಶಾಸಕರು ಮತ್ತು ಬೆಂಬಲಿಗರು ಜೊತೆ ನೀಡಿದರು.
2026 ರ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ ಸೇಡಿಗಾಗಿ ಕೇಂದ್ರದ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಮಮಾತ ಬ್ಯಾನರ್ಜಿ ಹಾಗೂ ಬೆಂಬಲಿಗರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಇಡಿ ದಾಳಿ ನಡೆಸಿ, ಶೋಧ ನಡೆಸುತ್ತಿರುವಾಗಲೇ ಮಮತಾ ಬ್ಯಾನರ್ಜಿ ಅವರು ಪ್ರತೀಕ್ ಜೈನ್ ಅವರ ಲೌಡನ್ ಸ್ಟ್ರೀಟ್ ನಿವಾಸಕ್ಕೆ ನಾಟಕೀಯ ಭೇಟಿ ನೀಡಿದ ಒಂದು ದಿನದ ನಂತರ ಈ ಪ್ರತಿಭಟನಾ ರ್ಯಾಲಿ ನಡೆದಿದೆ.

