ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಹಕ್ಕುಗಳನ್ನು ಟೀಕಿಸುವ ಬದಲು ತನ್ನ ದೇಶವನ್ನು ಸರಿಪಡಿಸಿಕೊಳ್ಳುವಂತೆ ಪಾಕಿಸ್ತಾನಕ್ಕೆ ಭಾರತ ಖಡಕ್ ಎಚ್ಚರಿಕೆ ನೀಡಿದೆ. ಭಾರತದ ಜಮ್ಮು ಮತ್ತು ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಪಾಕಿಸ್ತಾನ ಆರೋಪಿಸಿದೆ.
ಭಾರತವು ಜಮ್ಮು ಮತ್ತು ಕಾಶ್ಮೀರವನ್ನು ವಶಪಡಿಸಿಕೊಂಡಿದೆ ಎಂದು ಆರೋಪ ಮಾಡಿದೆ. ಪಾಕಿಸ್ತಾನದ ಹೇಳಿಕೆಯನ್ನು ತಳ್ಳಿಹಾಕಿದ ಭಾರತ ಪಾಕ್‌ಗೆ ದಿಟ್ಟ ಉತ್ತರ ನೀಡಿದೆ. ವಿಶ್ವಸಂಸ್ಥೆಯಲ್ಲಿನ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್ ಪಾಕಿಸ್ತಾನದ ಹೇಳಿಕೆಗಳಿಗೆ ಪ್ರತಿಕ್ರಿಯಿಸುವುದು ಕೂಡ ಅಪರಾಧ ಎಂದರು. ಇದೇ ವಿಚಾರವಾಗಿ ವಿಶ್ವಸಂಸ್ಥೆಯಲ್ಲಿ ಭಾರತದ ವಿದೇಶಾಂಗ ವ್ಯವಹಾರಗಳ ಪ್ರತಿನಿಧಿ ಜಗಪ್ರೀತ್ ಕೌರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. “ಭಾರತದಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆ ಮಾತನಾಡುವ ಮೊದಲು ಪಾಕಿಸ್ತಾನ ತನ್ನ ದೇಶವನ್ನು ಸ್ವಚ್ಛಗೊಳಿಸಬೇಕು. ಸ್ವಂತ ದೇಶದ ಜನರ ಹಕ್ಕುಗಳನ್ನು ರಕ್ಷಿಸಬೇಕು. ಅಭಿವೃದ್ಧಿಯತ್ತ ಗಮನ ಹರಿಸಬೇಕೆಂದು ಸೂಚನೆ ನೀಡಿದರು.
ಜೊತೆಗೆ ಈ ಹಿಂದೆ ಆ ದೇಶದ ನಾಯಕರೇ ಭಯೋತ್ಪಾದಕ ಗುಂಪುಗಳನ್ನು ಪ್ರೋತ್ಸಾಹಿಸುತ್ತಿರುವುದನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಭಯೋತ್ಪಾದಕರಿಗೆ ತರಬೇತಿ ನೀಡಿ ಭಾರತ ಮತ್ತು ಅಫ್ಘಾನಿಸ್ತಾನಕ್ಕೆ ಕಳುಹಿಸಲಾಗುತ್ತದೆ. ಹಿಂದೂಗಳು, ಮುಸ್ಲಿಮರು, ಸಿಖ್ಖರು ಮತ್ತು ಕ್ರಿಶ್ಚಿಯನ್ನರು ತಮ್ಮ ದೇಶದಲ್ಲಿ ಧರ್ಮನಿಂದೆಯ ಅಪರಾಧಕ್ಕಾಗಿ ಕಠಿಣ ಶಿಕ್ಷೆಗೆ ಒಳಗಾಗಿದ್ದಿದೆ, ಜೊತೆಗೆ ಮರಣದಂಡನೆಗಳೂ ಇವೆ. ಅಂತಹ ಪಾಕಿಸ್ತಾನ..ಯಾವುದು ಒಳ್ಳೆಯದು, ಯಾವುದು ಕೆಟ್ಟದ್ದು ಎಂಬುದನ್ನು ಜಗತ್ತಿಗೆ ಹೇಳುತ್ತದೆ. ಲಡಾಖ್ ಮತ್ತು ಜಮ್ಮು ಮತ್ತು ಕಾಶ್ಮೀರ ಎಲ್ಲವೂ ಭಾರತದ ಅವಿಭಾಜ್ಯ ಅಂಗಗಳು ಇದರ ಬಗ್ಗೆ ನೀವು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಕೌರ್ ಟಾಂಗ್ ನೀಡಿದರು.