ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಕ್ರೇನ್ ಜತೆ ಯುದ್ಧ ಮಾಡಿದ ನಂತರ ಇದೇ ಮೊದಲ ಬಾರಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್ ಜೊತೆ ದ್ವಿಪಕ್ಷೀಯ ಮಾತುಕತೆಗೆ ಸಿದ್ಧ ಎಂದು ಘೋಷಿಸಿದ್ದಾರೆ.
ರಷ್ಯಾ ಉಕ್ರೇನ್ ಯುದ್ಧ ಕುರಿತು ಶಾಂತಿ ಮಾತುಕತೆ ನಡೆಸದಿದ್ದರೆ ಮಧ್ಯಸ್ಥಿಕೆಯಿಂದ ಹೊರನಡೆಯುವುದಾಗಿ ಇತ್ತೀಚೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದರು. ಇದರ ಬೆನ್ನಲ್ಲೇ ಶಾಂತಿ ಮಾತುಕತೆಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಒಪ್ಪಿ, 30 ದಿನಗಳ ಭಾಗಶಃ ಕದನವಿರಾಮಕ್ಕೆ ಸಮ್ಮತಿ ಸೂಚಿಸಿದ್ದಾರೆ.
ಇಂದು ಟ್ರಂಪ್ ಮತ್ತು ಪುಟಿನ್ ಕದನವಿರಾಮ ಕುರಿತು ಸುದೀರ್ಘವಾದ ದೂರವಾಣಿ ಮಾತುಕತೆ ನಡೆಸಿದ್ದಾರೆ. ಇದರ ಫಲಶೃತಿಯಾಗಿ ರಷ್ಯಾ ಉಕ್ರೇನ್‌ನ ಇಂಧನ ಕೇಂದ್ರಗಳು, ವಿದ್ಯುತ್ ಘಟಕಗಳು ಮತ್ತು ಇನ್ನಿತರ ಶಕ್ತಿಕೇಂದ್ರಗಳ ಮೇಲೆ ದಾಳಿ ಮಾಡುವುದಿಲ್ಲ ಎಂದು ಒಪ್ಪಿದೆ. ಜೊತೆಗೆ ಉಕ್ರೇನ್‌ಗೆ ಅಮೆರಿಕ ಮತ್ತು ಐರೋಪ್ಯ ದೇಶಗಳು ಪೂರೈಸುತ್ತಿರುವ ಶಸ್ತ್ರಾಸ್ತ್ರಗಳನ್ನು ಕೂಡಲೇ ನಿಲ್ಲಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ.