ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ ವರ್ಷ ರಷ್ಯಾಗೆ ಭೇಟಿ ನೀಡುವಂತೆ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿ ಮೋದಿಗೆ ಆಹ್ವಾನ ನೀಡಿದ್ದಾರೆ.
ದ್ವಿಪಕ್ಷೀಯ ಸಂಬಂಧ ವೃದ್ಧಿ ಹಾಗೂ ಇನ್ನಿತರ ಮಹತ್ವಕರ ವಿಷಯಗಳ ಬಗ್ಗೆ ಮಾತನಾಡಲು ಅವಕಾಶ ಸಿಗುತ್ತದೆ. ನಮ್ಮ ಸ್ನೇಹಿತ ಪ್ರಧಾನಿ ಮೋದಿಯನ್ನು ರಷ್ಯಾದಲ್ಲಿ ನೋಡಲು ಸಂತೋಷಪಡುತ್ತೇವೆ ಎಂದು ಪುಟಿನ್ ಹೇಳಿದ್ದಾರೆ.
ಕ್ರೆಮ್ಲಿನ್‌ನಲ್ಲಿ ಪುಟಿನ್‌ರನ್ನು ಭೇಟಿ ಮಾಡಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರಿಗೆ ಹೇಳಿದ್ದಾರೆ. ಪ್ರಧಾನಿ ಮೋದಿ ನಮ್ಮ ದೇಶಕ್ಕೆ ಭೇಟಿ ನೀಡಬೇಕು, ಸಾಕಷ್ಟು ವಿಷಯಗಳ ಬಗ್ಗೆ ಮಾತುಕತೆ ನಡೆಸಬೇಕಿದೆ. ದೊಡ್ಡ ಪ್ರಮಾಣದ ಕೆಲಸಗಳಿವೆ ಎಂದು ರಷ್ಯಾ ಅಧ್ಯಕ್ಷರು ಹೇಳಿದ್ದಾರೆ.