ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಕ್ರೇನ್ ವಿರುದ್ಧದ ಯುದ್ಧದಲ್ಲಿ 30 ದಿನಗಳ ಕದನ ವಿರಾಮಕ್ಕೆ ಒಪ್ಪಿರುವುದಾಗಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.
ಅಮೆರಿಕ ಮುಂದಿಟ್ಟ ಪ್ರಸ್ತಾವನೆಯನ್ನು ತಾತ್ವಿಕವಾಗಿ ಒಪ್ಪುವುದಾಗಿ ಹೇಳಿರುವ ಪುಟಿನ್, ಕದನವಿರಾಮಕ್ಕೆ ನಿಯಮಗಳನ್ನು ರೂಪಿಸಬೇಕು ಎಂಬ ಷರತ್ತು ಮುಂದಿಟ್ಟಿದ್ದಾರೆ. ಜೊತೆಗೆ ಯಾವುದೇ ಕದನ ವಿರಾಮವು ಶಾಶ್ವತ ಶಾಂತಿಗೆ ದಾರಿ ಮಾಡಿಕೊಡದು ಎಂದು ಹೇಳಿದ್ದಾರೆ.
ಉಕ್ರೇನ್ ಮತ್ತು ರಷ್ಯಾ ನಡುವಿನ ಹೋರಾಟವನ್ನು ಕೊನೆಗೊಳಿಸಬೇಕು ಎಂಬ ಉದಾತ್ತ ಧ್ಯೇಯ ಹೊಂದಿದ್ದಕ್ಕಾಗಿ ಮತ್ತು ಶಾಂತಿ ಸ್ಥಾಪನೆಗೆ ಶ್ರಮಿಸಿದ್ದಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿಶ್ವ ನಾಯಕರಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಧನ್ಯವಾದ ಅರ್ಪಿಸಿದ್ದಾರೆ.