ಹೊಸದಿಗಂತ ಡಿಜಿಟಲ್ ಡೆಸ್ಕ್:
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಶೀಘ್ರದಲ್ಲೇ ಸಾಯುತ್ತಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಆಘಾತಕಾರಿ ಹೇಳಿಕೆ ನೀಡಿದ್ದಾರೆ.
ಪುಟಿನ್ ಅವರ ಆರೋಗ್ಯದ ಬಗ್ಗೆ ವದಂತಿಗಳು ನಿರಂತರವಾಗಿ ಹರಡುತ್ತಿದ್ದು ಇದರ ನಡುವೆ ಪ್ಯಾರಿಸ್‌ನಲ್ಲಿ ಯುರೋಪಿಯನ್ ಪತ್ರಕರ್ತರಿಗೆ ನೀಡಿದ ಸಂದರ್ಶನದಲ್ಲಿ ಝೆಲೆನ್ಸ್ಕಿ ಈ ಹೇಳಿಕೆ ನೀಡಿದ್ದಾರೆ.
ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ “ಶೀಘ್ರದಲ್ಲೇ ಸಾಯುತ್ತಾರೆ”. ಇದರಿಂದ ಎರಡು ರಾಷ್ಟ್ರಗಳ ನಡುವಿನ ಯುದ್ಧ ಅಂತ್ಯಗೊಳ್ಳಲಿದೆ. ಪುಟಿನ್ ಶೀಘ್ರದಲ್ಲೇ ಸಾಯುತ್ತಾರೆ. ಇದೇ ಸತ್ಯ. ಇದರಿಂದ ಉಕ್ರೇನ್ ಮತ್ತು ರಷ್ಯಾದ ನಡುವಿನ ಯುದ್ಧ ಕೊನೆಗೊಳ್ಳುತ್ತದೆ ಎಂದು ಝೆಲೆನ್ಸ್ಕಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಭೇಟಿಯಾದ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಪುಟಿನ್ ಅಧಿಕಾರದಲ್ಲಿ ಉಳಿಯಲು ಬಯಸುತ್ತಾರೆ. ಆದರೆ ಅವರು ಶೀಘ್ರದಲ್ಲೇ ಸಾಯುತ್ತಾರೆ. ಅದು ಸತ್ಯ, ಮತ್ತು ನಂತರ ಎಲ್ಲವೂ ಮುಗಿಯುತ್ತದೆ ಎಂದು ಹೇಳಿದ್ದಾರೆ.
ಇದಕ್ಕೂ ಮೊದಲು, ಉಕ್ರೇನ್ ಮತ್ತು ರಷ್ಯಾ ಎರಡೂ ಯುಎಸ್ ಮಧ್ಯಸ್ಥಿಕೆಯ ಒಪ್ಪಂದವನ್ನು ಜಾರಿಗೆ ತರಲು ಒಪ್ಪಿಕೊಂಡಿತ್ತು. ಈ ಒಪ್ಪಂದಕ್ಕಾಗಿ ಝೆಲೆನ್ಸ್ಕಿ ಅಮೆರಿಕಕ್ಕೆ ಧನ್ಯವಾದ ಹೇಳಿದ್ದಾರೆ.ಈ ನಿರೂಪಣೆಗಳೊಂದಿಗೆ ನಾವು ಒಪ್ಪಲು ಸಾಧ್ಯವಿಲ್ಲ. ನಾವು ಯುದ್ಧಭೂಮಿಯಲ್ಲಿ ಹೋರಾಡುತ್ತಿದ್ದೇವೆ ಎಂಬುದನ್ನು ನಮ್ಮ ಉದಾಹರಣೆಗಳ ಮೂಲಕ ತೋರಿಸುತ್ತೇವೆ ಎಂದು ಅವರು ಹೇಳಿದರು.