ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರಕಾರದಿಂದ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪ ವಿಭಾಗದ ಡಿವೈಎಸ್ಪಿ ಆಗಿದ್ದ ಡಾ. ಗಾನ ಪಿ. ಕುಮಾರ್ ಅವರನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸಿ ಶುಕ್ರವಾರ ಸರಕಾರ ಆದೇಶ ಹೊರಡಿಸಿದೆ.
ಖಾಲಿಯಾಗಲಿರುವ ಅವರ ಸ್ಥಾನಕ್ಕೆ ಸದ್ಯಕ್ಕೆ ಯಾರನ್ನು ನೇಮಕ ಮಾಡಿಲ್ಲ.