ರಾಜತಾಂತ್ರಿಕ ಬಿಕ್ಕಟ್ಟು ಪರಿಹಾರಕ್ಕೆ ಪಕ್ಷದ ಪದಾಧಿಕಾರಿಗಳನ್ನು ಅಮಾನತುಗೊಳಿಸಿದ ಬಿಜೆಪಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಪ್ರವಾದಿ ಮಹಮದ್ದರ ಬಗ್ಗೆ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ನೀಡಿದ್ದ ವಿವಾದಾತ್ಮಕ ಹೇಳಿಕೆ ಖಂಡಿಸಿ ಗಲ್ಫ್ ರಾಷ್ಟ್ರಗಳು ಭಾರತದ ಮೇಲೆ ರಾಜತಾಂತ್ರಿಕ ಒತ್ತಡ ಹೇರಿದ್ದವು. ಜೊತೆಗೆ ಕತಾರ್‌, ಇರಾನ್‌, ಕುವೈತ್‌ ದೇಶಗಳ ಸರ್ಕಾರಗಳು ಆ ದೇಶಗಳಲ್ಲಿರುವ ಭಾರತೀಯ ರಾಯಬಾರಿಗಳನ್ನು ಕರೆಸಿ ಆಕ್ಷೇಪಣೆ ವ್ಯಕ್ತಪಡಿಸಿವೆ. ಭಾರತೀಯ ಉತ್ಪನ್ನಗಳ ಬಹಿಷ್ಕಾರಕ್ಕೆ ಆ ರಾಷ್ಟ್ರಗಳ ಸಾಮಾಜಿಕ ಮಾಧ್ಯಮಗಳಲ್ಲಿ ಕರೆನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ರಾಜತಾಂತ್ರಿಕ ಬಿಕ್ಕಟ್ಟು ಪರಿಹಾರಕ್ಕೆ ಮುಂದಾದ ಬಿಜೆಪಿ ಪಕ್ಷದ ಇಬ್ಬರು ಪದಾಧಿಕಾರಿಗಳನ್ನು  ಅಮಾನತುಗೊಳಿಸಿದೆ.
ಬಿಜೆಪಿ ತನ್ನ ರಾಷ್ಟ್ರೀಯ ವಕ್ತಾರ ನೂಪುರ್ ಶರ್ಮಾ ಅವರನ್ನು ಅಮಾನತುಗೊಳಿಸಿದೆ ಮತ್ತು ಪ್ರವಾದಿ ಬಗ್ಗೆ ಟ್ವಿಟರ್‌ ನಲ್ಲಿ ಪೋಸ್ಟ್‌ ಮಾಡಿದ್ದ ದೆಹಲಿಯ ಮತ್ತೊಬ್ಬ ನಾಯಕ ನವೀನ್ ಕುಮಾರ್ ಜಿಂದಾಲ್ ಅವರನ್ನು ಉಚ್ಚಾಟಿಸಿದೆ. ಬಿಜೆಪಿ “ಎಲ್ಲಾ ಧರ್ಮಗಳನ್ನು ಗೌರವಿಸುತ್ತದೆ” ಮತ್ತು “ಯಾವುದೇ ಧಾರ್ಮಿಕ ವ್ಯಕ್ತಿಗೆ ಅವಮಾನಗಳಾದರೆ ಬಲವಾಗಿ ಖಂಡಿಸುತ್ತದೆ” ನೂಪುರ್ ಅವರ ಹೇಳಿಕೆ ಪಕ್ಷದ ನಿಲುವಲ್ಲ‌ʼ ಎಂದು ಬಿಜೆಪಿ ಮೂಲಗಳು ಸ್ಪಷ್ಟಪಡಿಸಿವೆ. ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರು ಕತಾರ್‌ಗೆ ಮೂರು ದಿನಗಳ ಅಧಿಕೃತ ಭೇಟಿಯಲ್ಲಿರುವಾಗಲೇ ಈ ವಿವಾದ ಉಂಟಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!