ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಸರ್ಕಾರವು ಬೆಂಗಳೂರಿನ ಬಳಿಯ ಹೆಸರಘಟ್ಟದಲ್ಲಿ ಕ್ವಾಂಟಮ್ ಸಿಟಿ (ಕ್ಯೂ-ಸಿಟಿ) ಗಾಗಿ 6.17 ಎಕರೆ ಭೂಮಿಯನ್ನು ಮಂಜೂರು ಮಾಡಿದೆ.
ಇದರಲ್ಲಿ ಅತ್ಯಾಧುನಿಕ ಪ್ರಯೋಗಾಲಯಗಳು, ನವೋದ್ಯಮಗಳಿಗೆ ಇನ್ಕ್ಯುಬೇಷನ್ ಸೌಲಭ್ಯಗಳು ಮತ್ತು ಶೈಕ್ಷಣಿಕ-ಕೈಗಾರಿಕಾ ಸಹಯೋಗಕ್ಕಾಗಿ ಮೂಲಸೌಕರ್ಯಗಳು ಇರಲಿದದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಹೇಳಿದ್ದಾರೆ.
2035 ರ ವೇಳೆಗೆ ಕರ್ನಾಟಕವು ಕ್ವಾಂಟಮ್ ಕಂಪ್ಯೂಟಿಂಗ್‌ನಲ್ಲಿ ದಿಟ್ಟ ಉಪಕ್ರಮಗಳ ಮೂಲಕ 20 ಬಿಲಿಯನ್ ಡಾಲರ್‌ಗಳ ಕ್ವಾಂಟಮ್ ಆರ್ಥಿಕತೆಯನ್ನು ನಿರ್ಮಿಸುವ ಗುರಿಯನ್ನು ಹೊಂದಿದೆ ಎಂದು ಸಚಿವರು ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ದೃಷ್ಟಿಕೋನದ ಭಾಗವಾಗಿ ಮತ್ತು ಭಾರತದ ಮೊದಲ ಕ್ವಾಂಟಮ್ ಇಂಡಿಯಾ ಬೆಂಗಳೂರು ಸಮಾವೇಶದಲ್ಲಿ ಮಾಡಿದ ಬದ್ಧತೆಗೆ ಅನುಗುಣವಾಗಿ, ಸರ್ಕಾರವು ಕ್ಯೂ-ಸಿಟಿ ಸ್ಥಾಪಿಸಲು ಭೂಮಿಯನ್ನು ಅನುಮೋದಿಸಿದೆ ಎಂದು ಮಾಹಿತಿ ನೀಡಿದ್ದಾರೆ.