Tuesday, September 16, 2025

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಆರ್‌ಪಿಎಸ್‌ಸಿ ಸದಸ್ಯೆ ಮಂಜು ಶರ್ಮಾ ರಾಜೀನಾಮೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಕವಿ ಕುಮಾರ್ ವಿಶ್ವಾಸ್ ಅವರ ಪತ್ನಿ ಮತ್ತು ರಾಜಸ್ಥಾನ ಸಾರ್ವಜನಿಕ ಸೇವಾ ಆಯೋಗದ ಸದಸ್ಯೆ ಮಂಜು ಶರ್ಮಾ ಅವರು ರಾಜೀನಾಮೆ ನೀಡಿದ್ದು, ರಾಜಸ್ಥಾನ ರಾಜ್ಯಪಾಲರು ಅಂಗೀಕರಿಸಿದ್ದಾರೆ.

2021ರ ಪರೀಕ್ಷಾ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ರಾಜಸ್ಥಾನ ಹೈಕೋರ್ಟ್‌ ಹೇಳಿಕಗಳನ್ನು ನೀಡಿದ ಎರಡು ವಾರಗಳ ಬಳಿಕ ಮಂಜು ಶರ್ಮಾ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಸಬ್ ಇನ್ಸ್‌ಪೆಕ್ಟರ್ ನೇಮಕಾತಿ 2021ರ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿ ಹೈಕೋರ್ಟ್ ರಾಜಸ್ಥಾನ ಸಾರ್ವಜನಿಕ ಸೇವಾ ಆಯೋಗದ ಸದಸ್ಯರನ್ನು ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೆ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ವಿವಾದಾತ್ಮಕ 2021ರ ಪರೀಕ್ಷೆಯನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಇದಾದ ಕೆಲವು ಬಳಿಕ ಶರ್ಮಾ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ರಾಜಸ್ಥಾನ ಸಾರ್ವಜನಿಕ ಸೇವಾ ಆಯೋಗ ಪರೀಕ್ಷೆಯಲ್ಲಿ ಭ್ರಷ್ಟಾಚಾರ, ರಾಜಸ್ಥಾನ ಸಾರ್ವಜನಿಕ ಸೇವಾ ಆಯೋಗದ ಸದಸ್ಯರ ಪಾಲ್ಗೊಳ್ಳುವಿಕೆ ಮತ್ತು ಲಿಖಿತ, ಸಂದರ್ಶನ ಹಂತಗಳಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ