Thursday, August 11, 2022

Latest Posts

ಪ್ರಶ್ನೆಪತ್ರಿಕೆ ಸೋರಿಕೆ: ಪರೀಕ್ಷೆ ರದ್ದು

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದರಿಂದ ದೇಶದಾದ್ಯಂತ ನಡೆಯಬೇಕಿದ್ದ ಯೋಧರ ನೇಮಕಾತಿಯ ಪರೀಕ್ಷೆಯನ್ನು ಸೇನೆ ರದ್ದುಗೊಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪುಣೆಯ ಸ್ಥಳೀಯ ಪೊಲೀಸರ ನೆರವಿನೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಸೈನಿಕರ ನೇಮಕಾತಿಗೆ ಸಂಬಂಧಿಸಿದಂತೆ ಸಾಮಾನ್ಯ ಪ್ರವೇಶ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದನ್ನು ಪತ್ತೆ ಮಾಡಲಾಗಿದೆ. ಈ ಬಗ್ಗೆ ತನಿಖೆ ಮುಂದುವರಿದಿದೆ.
ನೇಮಕಾತಿಗೆ ಸಂಬಂಧಿಸಿದಂತೆ ಭಾರತೀಯ ಸೇನೆ ಯಾವುದೇ ರೀತಿಯ ಅಕ್ರಮಗಳನ್ನು ಸಹಿಸುವುದಿಲ್ಲ. ಅಭ್ಯರ್ಥಿಗಳ ಆಯ್ಕೆ ಸಂಪೂರ್ಣವಾಗಿ ಪಾರದರ್ಶಕವಾಗಿ ನಡೆಯುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss