spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಾಫಿ ಬೆಳೆ ಹಾನಿ ಪರಿಶೀಲಿಸಿ ಶೀಘ್ರ ಮಧ್ಯಂತರ ವರದಿ: ಕಾಫಿ ಮಂಡಳಿ ಸಿಇಒ ಜಗದೀಶ್

- Advertisement -Nitte

ಹೊಸದಿಗಂತ ವರದಿ, ಕೊಡಗು:

ಕೊಡಗು, ಚಿಕ್ಕಮಗಳೂರು ಹಾಗೂ ಹಾಸನ‌ ಜಿಲ್ಲೆಗಳಿಗೆ ಭೇಟಿ ನೀಡಿ ಅತಿವೃಷ್ಟಿ ಹಾಗೂ ಅಕಾಲಿಕ ಮಳೆಯಿಂದ ಉಂಟಾಗಿರುವ ಕಾಫಿ ಬೆಳೆ ನಷ್ಟದ ಬಗ್ಗೆ ಸರಕಾರಕ್ಕೆ ಮಧ್ಯಂತರ ವರದಿಯನ್ನು ಶೀಘ್ರವೇ ನೀಡಲಾಗುವುದು ಎಂದು ಭಾರತೀಯ ಕಾಫಿ ಮಂಡಳಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಕಾರ್ಯದರ್ಶಿ ಜಗದೀಶ್ ಅವರು ಭರವಸೆ ನೀಡಿದರು.
ದಕ್ಷಿಣ ಕೊಡಗಿನ ಶ್ರೀಮಂಗಲ ವ್ಯಾಪ್ತಿಯಲ್ಲಿ ಅಕಾಲಿಕ ಮಳೆಯಿಂದ ಬೆಳೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ನಡೆದ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು.
ಈಗಾಗಲೇ ಅರೇಬಿಕಾ ಕಾಫಿಯಲ್ಲಿ ಎಲ್ಲಾ ಕಡೆ ಶೇ.33 ಕ್ಕಿಂತ ಬೆಳೆ ನಷ್ಟವಾಗಿರುವ ಬಗ್ಗೆ ಸಮೀಕ್ಷೆ ತಂಡ ಮಾಹಿತಿ ನೀಡಿದ್ದು, ಇನ್ನೂ 10-15 ದಿನ ಅಕಾಲಿಕ ಮಳೆ ಸುರಿದರೆ ಅರೇಬಿಕಾದಂತೆ ರೋಬಸ್ಟಾ ಕಾಫಿಯ ನಷ್ಟದ ಪ್ರಮಾಣ ಇನ್ನೂ ಹೆಚ್ಚಾಗಲಿದೆ. ಆದ್ದರಿಂದ ಇನ್ನೂ ಹತ್ತು ದಿನದ ನಂತರ ಕಾಫಿ ನಷ್ಟದ ಸಮೀಕ್ಷೆ ಮಾಡಿ ಅಂತಿಮ ವರದಿ ಸಲ್ಲಿಸುವುದು ಸೂಕ್ತ ಎಂದು ಅವರು ಅಭಿಪ್ರಾಯಪಟ್ಟರು.
ಎಲ್ಲಾ ತೋಟಗಳಿಗೆ ಸಮೀಕ್ಷಾ ತಂಡ ತೆರಳಿ ಬೆಳೆ ನಷ್ಟವನ್ನು ಅಂದಾಜಿಸಲು ಸಾಧ್ಯವಾಗುವುದಿಲ್ಲ ಒಂದು ಗ್ರಾಮದ ಕನಿಷ್ಟ 10 ತೋಟಗಳಿಗೆ ಭೇಟಿ ನೀಡಿ ನಷ್ಟದ ಪ್ರಮಾಣವನ್ನು ಅಂದಾಜಿಸಿ ವರದಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗುವುದು. ಒಂದು ಗ್ರಾಮದಲ್ಲಿ ಶೇ. 33 ರಷ್ಟು ಬೆಳೆ ನಷ್ಟ ಉಂಟಾದರೆ ಇಡೀ ಗ್ರಾಮದ ಬೆಳೆಗಾರರಿಗೆ ಪರಿಹಾರ ಲಭ್ಯವಾಗಲಿದೆ ಎಂದು ಅವರು ಹೇಳಿದರು.
ಗೋದಾಮು, ಕಾಫಿ ಒಣಗಿಸಲು ಕಣ, ಅದರಲ್ಲೂ ಇಂಟರ್‌ ಲಾಕ್ ಇನ್ನು ಮುಂದೆ ಸಹಾಯಧನ ದೊರೆಯಲಿದೆ. ಮಂಡಳಿಯ ಸಭೆಯಲ್ಲಿ ಈ ಬಗ್ಗೆ ಸುದೀರ್ಘ ಚರ್ಚೆಯ ನಂತರ ಸಣ್ಣ ಬೆಳೆಗಾರರ ಹಿತ ರಕ್ಷಣೆಗೆ ಮತ್ತೆ ಮುಂದುವರಿಸಲಾಗಿದೆ ಎಂದು ಹೇಳಿದರು.
ಕಾಫಿ ಮಂಡಳಿ ವಿಶೇಷವಾಗಿ ಸಣ್ಣ ಬೆಳೆಗಾರರ ಹಿತ ಕಾಪಾಡಲು ಮತ್ತು ಅಭಿವೃದ್ದಿಗೆ ಪೂರಕವಾಗಿ ಸ್ಪಂದಿಸಬೇಕು. ಇಲ್ಲದಿದ್ದರೆ ಎಲ್ಲಾ ಕಾಫಿ ಬೆಳೆಗಾರರು ಕಾಫಿ ಮಂಡಳಿಯ ವಿರುದ್ಧ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ. ಕಾಫಿ ಮಂಡಳಿಯಲ್ಲಿ ದೊಡ್ಡ ಬೆಳೆಗಾರರನ್ನು ಪ್ರತಿನಿಧಿಸುವ ಸಂಘ ಸಂಸ್ಥೆಗಳಿಗೆ ಪ್ರಾಮುಖ್ಯತೆ ನೀಡಲಾಗುತ್ತಿದ್ದು, ಸಣ್ಣ ಬೆಳೆಗಾರರ ಅಭಿಪ್ರಾಯ ಹಾಗೂ ಧ್ವನಿಯಾಗಿರುವ ಸಂಘಟನೆಗಳನ್ನು ಪರಿಗಣಿಸುತ್ತಿಲ್ಲ.ಇದರಿಂದ ಸಣ್ಣ ಬೆಳೆಗಾರರಿಗೆ ಅನ್ಯಾಯವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss