ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಆನ್ ಲೈನ್ ಗೇಮ್ ಮತ್ತು ಲೋನ್ ಆಪ್ಯ್ ಬ್ಯಾನ್ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಮಂಗಳವಾರ ದಕ್ಷಿಣ ಕನ್ನಡದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿ, ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಹಲವು ರಾಜ್ಯಗಳಲ್ಲಿ ಈಗಾಗಲೇ ಆನ್‌ಲೈನ್ ಗೇಮ್ ಬ್ಯಾನ್ ಮಾಡಲಾಗಿದ್ದು, ಈ ನಿಟ್ಟಿನಲ್ಲಿ ನಾವು ಕೂಡ ಚಿಂತನೆ ನಡೆಸಿದ್ದು, ಈ ಬಗ್ಗೆ ಶೀಘ್ರ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ಸೈಬರ್ ಕ್ರೈಮ್‌ಗೆ ಕಡಿವಾಣ ಹಾಕುವುದಕ್ಕೆ ಪೋಲಿಸರಿಗೆ ಸೂಚನೆ ನೀಡಲಾಗಿದೆ. ಇನ್ನೂ ಮಂಗಳೂರಿನಲ್ಲಿ ನಡೆಯುತ್ತಿರುವ ಕೋಮುವಾದ ಗಲಾಟೆಗಳಿಗೆ, ನೈತಿಕ ಪೋಲಿಸ್ ಗಿರಿಗೆ ಕಡಿವಾಣ ಹಾಕಲೇ ಬೇಕು ಅಂತ ಪೋಲಿಸರಿಗೆ ಸೂಚನೆ ನೀಡಿದರು.