Saturday, December 9, 2023

Latest Posts

ಸ್ತಬ್ಧ ಚಿತ್ರ ವಿವಾದ ರಾಜಕೀಯ ಷಡ್ಯಂತ್ರ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಆರೋಪ

ಹೊಸ ದಿಗಂತ ವರದಿ, ಮಂಗಳೂರು:

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಸಂಬಂಧಿಸಿ ಕೇಂದ್ರ ರಕ್ಷಣಾ ಇಲಾಖೆಯ ತಜ್ಞರ ಸಮಿತಿ ನಿಯಮಗಳನ್ನು ರೂಪಿಸಿದೆ. ಕೇರಳ ಸರ್ಕಾರ ಇದನ್ನು ಸರಿಯಾಗಿ ಪಾಲಿಸದೆ ಈಗ ನಾರಾಯಣ ಗುರುಗಳ ಸ್ತಬ್ಧ ಚಿತ್ರಕ್ಕೆ ಅವಕಾಶ ನಿರಾಕರಿಸಲಾಗಿದೆ ಎಂದು ಅಪಪ್ರಚಾರ ಮಾಡುತ್ತಿರುವುದು ರಾಜಕೀಯ ಷಡ್ಯಂತ್ರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ಕುಮಾರ್ ಕಟೀಲು ಹೇಳಿದ್ದಾರೆ.
ಕಾಂಗ್ರೆಸ್ ಹಾಗೂ ಎಡಪಕ್ಷಗಳು ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ನಾರಾಯಣ ಗುರುಗಳ ಸ್ತಬ್ಧ ಚಿತ್ರಕ್ಕೆ ಅವಕಾಶ ನಿರಾಕರಿಸಲಾಗಿದೆ ಎಂದು ಜನರಿಗೆ ತಪ್ಪು ಸಂದೇಶ ನೀಡುತ್ತಿವೆ. ಸಮಾನತೆಯ ಸಂದೇಶ ಸಾರಿದ ಪೂಜ್ಯ ನಾರಾಯಣ ಗುರುಗಳ ಹೆಸರಿನಲ್ಲಿ ಕೀಳುಮಟ್ಟದ ರಾಜಕೀಯ ನಡೆಸುತ್ತಿರುವುದು ಖಂಡನೀಯ. ಸದಾ ಹಿಂದು ವಿರೋಧಿ ನೀತಿ ಅನುಸರಿಸುತ್ತಾ ಬಂದಿರುವ ಕಾಂಗ್ರೆಸ್ ಹಾಗೂ ಎಡಪಕ್ಷಗಳು ಹಿಂದೂಗಳ ಏಕತೆ ಒಡೆಯಲು ಉದ್ದೇಶ ಪೂರ್ವಕವಾಗಿ ಇಂತಹ ವಿವಾದಗಳನ್ನು ಸೃಷ್ಟಿಸುತ್ತಿವೆ ಎಂದು ಅವರು ಹೇಳಿದ್ದಾರೆ.
ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ನಾರಾಯಣ ಗುರುಗಳ ಸಂಕಲ್ಪ ಕೇಂದ್ರವಾದ ಶಿವಗಿರಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಅಧಿಕಾರಿದಲ್ಲಿರುವಾಗ ಮತಾಂಧ ಟಿಪ್ಪುವಿನ ಜಯಂತಿ ಆಚರಿಸಿದ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಸರ್ಕಾರದ ಬಗ್ಗೆ ಮಾತನಾಡುದವ ನೈತಿಕ ಹಕ್ಕಿಲ್ಲ ಎಂದು ನಳಿನ್‌ಕುಮಾರ್ ಕಟೀಲು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!