ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಕದಿನ ವಿಶ್ವಕಪ್ಗಾಗಿ ಸೌತ್ ಆಫ್ರಿಕಾ ತಂಡವನ್ನು ಪ್ರಕಟಿಸಲಾಗಿದೆ. ಟೆಂಬಾ ಬವುಮಾ ಮುನ್ನಡೆಸಲಿದ್ದಾರೆ. ತಂಡದಲ್ಲಿ ಸ್ಟಾರ್ ಆಟಗಾರರಾಗಿ ಕ್ವಿಂಟನ್ ಡಿಕಾಕ್ ಕಾಣಿಸಿಕೊಂಡಿದ್ದಾರೆ.
ಆದ್ರೆ ವಿಶ್ವಕಪ್ಗೆ ಸೌತ್ ಆಫ್ರಿಕಾ ತಂಡದ ಘೋಷಣೆ ಬೆನ್ನಲ್ಲೇ ಕ್ವಿಂಟನ್ ಡಿಕಾಕ್ ಒನ್ಡೆ ಕ್ರಿಕೆಟ್ನಿಂದ ನಿವೃತ್ತಿಯನ್ನು ಘೋಷಿಸಿದ್ದಾರೆ. ಅಂದರೆ ಏಕದಿನ ವಿಶ್ವಕಪ್ ಬಳಿಕ ಏಕದಿನ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳುವುದಾಗಿ ಡಿಕಾಕ್ ತಿಳಿಸಿದ್ದಾರೆ. ಹೀಗಾಗಿ 30 ವರ್ಷದ ಕ್ವಿಂಟನ್ ಪಾಲಿಗೆ ಇದು ಕೊನೆಯ ಏಕದಿನ ವಿಶ್ವಕಪ್ ಆಗಿರಲಿದೆ.
ಸೌತ್ ಆಫ್ರಿಕಾ ಪರ 140 ಏಕದಿನ ಪಂದ್ಯಗಳನ್ನಾಡಿರುವ ಕ್ವಿಂಟನ್ ಡಿಕಾಕ್ 5966 ರನ್ ಕಲೆಹಾಕಿದ್ದಾರೆ. ಈ ವೇಳೆ 17 ಶತಕ ಹಾಗೂ 29 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ಭಾರತದಲ್ಲಿ ನಡೆಯಲಿರುವ ವಿಶ್ವಕಪ್ ಮೂಲಕ ಏಕದಿನ ಕ್ರಿಕೆಟ್ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ. ಅದರಂತೆ ಕ್ವಿಂಟನ್ ಡಿಕಾಕ್ ಚಾಂಪಿಯನ್ ಪಟ್ಟದೊಂದಿಗೆ ವಿದಾಯ ಹೇಳಲಿದ್ದಾರಾ ಕಾದು ನೋಡಬೇಕಿದೆ.