Sunday, December 7, 2025

ಭಾರತದ ವಿರುದ್ಧ ಭರ್ಜರಿ ಶತಕ ಸಿಡಿಸಿದ ಕ್ವಿಂಟನ್ ಡಿ ಕಾಕ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಟೀಂ ಇಂಡಿಯಾ ವಿರುದ್ಧದ ಏಕದಿನ ಪಂದ್ಯಗಳಲ್ಲಿ ಸಪ್ಪೆ ಪ್ರದರ್ಶನ ನೀಡಿದ್ದ ದಕ್ಷಿಣ ಆಫ್ರಿಕಾದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಕ್ವಿಂಟನ್ ಡಿ ಕಾಕ್ ಇದೀಗ ಮೂರನೇ ಏಕದಿನದಲ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ.

ವಿಶಾಖಪಟ್ಟಣದಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ಸರಣಿಯ ನಿರ್ಣಾಯಕ ಪಂದ್ಯದಲ್ಲಿ, ಡಿ ಕಾಕ್ ಕೇವಲ 80 ಎಸೆತಗಳಲ್ಲಿ ತಮ್ಮ ಶತಕ ಪೂರೈಸಿದರು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ಮೊದಲ ಓವರ್‌ನಲ್ಲಿಯೇ ವಿಕೆಟ್ ಕಳೆದುಕೊಂಡಿತು. ಆದರೆ ಕ್ವಿಂಟನ್ ಡಿ ಕಾಕ್ ತಮ್ಮ ಆಕ್ರಮಣಕಾರಿ ಬ್ಯಾಟಿಂಗ್ ಅನ್ನು ಮುಂದುವರಿಸಿ, ಏಕದಿನ ಕ್ರಿಕೆಟ್‌ನಲ್ಲಿ ತಮ್ಮ 23 ನೇ ಶತಕವನ್ನು ಪೂರೈಸಿದರು. ಇದರೊಂದಿಗೆ, ಅವರು ಸೌರವ್ ಗಂಗೂಲಿ ಸೇರಿದಂತೆ ಮೂವರು ಲೆಜೆಂಡರಿ ಆಟಗಾರರನ್ನು ಹಿಂದಿಕ್ಕಿದರು.

error: Content is protected !!