Thursday, December 1, 2022

Latest Posts

ʼಗುಜರಾತ್ ತೊರೆಯಿರಿ, ಸತ್ಯೇಂದ್ರ ಜೈನ್ ಬಿಡುಗಡೆ ಮಾಡುತ್ತೇವೆʼ: ಬಿಜೆಪಿ ಆಫರ್ ಮಾಡಿದೆ ಎಂದ ಕೇಜ್ರಿವಾಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಗುಜರಾತ್ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷವು ಒಪ್ಪಂದ ಮಾಡಿಕೊಳ್ಳಲು ತಮ್ಮನ್ನು ಸಂಪರ್ಕಿಸಿದೆ ಎಂದು ಹೇಳಿದ್ದಾರೆ.

ಈ ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿರುವ ಗುಜರಾತ್‌ನಲ್ಲಿ ಎಎಪಿ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದರೆ ಜೈಲಿನಲ್ಲಿರುವ ದೆಹಲಿ ಸಚಿವ ಸತ್ಯೇಂದ್ರ ಜೈನ್ ಅವರನ್ನು ಬಿಡುಗಡೆ ಮಾಡುವುದಾಗಿ ಬಿಜೆಪಿ ಭರವಸೆ ನೀಡಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

“ಬಿಜೆಪಿಯು ಸಿಸೋಡಿಯಾ ಅವರನ್ನು ತಲುಪಿ, ಅವರನ್ನು ತಮ್ಮ ಪಕ್ಷಕ್ಕೆ ಸೇರುವಂತೆ ಮನವೊಲಿಸಿ ಆಮಿಷ ಒಡ್ಡಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೇ ಆಪ್‌ ಅನ್ನು ತೊರೆದರೆ ಸಿಸೋಡಿಯಾ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲು ಬಿಜೆಪಿ ಮುಂದಾಗಿದೆ ಎಂದು ಆರೋಪಿಸಿದ್ದಾರೆ.

ಇಷ್ಟೇ ಅಲ್ಲದೇ ಸಿಸೋಡಿಯಾ ಬಿಜೆಪಿ ಪಾಳಯವನ್ನು ಸೇರಿಕೊಂಡರೆ ಅವರನ್ನು ದೆಹಲಿಯ ಮುಖ್ಯಮಂತ್ರಿಯನ್ನಾಗಿ ಮಾಡುವ ಆಮಿಷವನ್ನೂ ಬಿಜೆಪಿ ಒಡ್ಡಿದೆ ಎಂದು ಅರವಿಂದ್‌ ಕೇಜ್ರಿವಾಲ್‌ ಆರೋಪಿಸಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!