ಎಸ್‌.ಎಂ. ಕೃಷ್ಣಗೆ ಮರಣೋತ್ತರ ‘ಕರ್ನಾಟಕ ರತ್ನ’ ನೀಡಲು ಸರ್ಕಾರಕ್ಕೆ ಆರ್. ಅಶೋಕ್ ಮನವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಾಜಿ ಮುಖ್ಯಮಂತ್ರಿ, ದಿವಂಗತ ಎಸ್‌.ಎಂ ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ.

ಶಾಸಕ, ಸಚಿವ, ಸ್ಪೀಕರ್‌, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜೊತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅವರು ಅಪಾರವಾಗಿ ಶ್ರಮಿಸಿದ್ದರು. ರಾಜಧಾನಿ ಬೆಂಗಳೂರಿಗೆ ಸಿಲಿಕಾನ್‌ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯ. ವಿದೇಶಾಂಗ ಸಚಿವರಾಗಿ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!