Wednesday, November 29, 2023

Latest Posts

ವಿರೋಧ ಪಕ್ಷದ ನಾಯಕರಾಗಿ ಆರ್​.ಅಶೋಕ್: ಕಾಂಗ್ರೆಸ್ ಲೇವಡಿ​

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿರೋಧ ಪಕ್ಷದ ನಾಯಕರಾಗಿ ಆರ್​.ಅಶೋಕ್ (R. Ashok)​ ಆಯ್ಕೆಗೆ ಕಾಂಗ್ರೆಸ್ ಲೇವಡಿ​ ಮಾಡಿದೆ.

ಕನಕಪುರದಲ್ಲಿ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿರುವ ಬಿಜೆಪಿ ಅಭ್ಯರ್ಥಿ ಈಗ ವಿರೋಧ ಪಕ್ಷದ ನಾಯಕ ಎಂದು ವಿ ಲೇವಡಿ​ ಮಾಡಿದೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್​, ವಿರೋಧ ಪಕ್ಷದ ನಾಯಕನಾಗಲು ಬೇಕಿರುವ ಜ್ಞಾನ, ಅರ್ಹತೆ ಯಾವುದೂ ಇಲ್ಲದ ನಕಲಿ ಸಾಮ್ರಾಟನೇ ಕೊನೆಯ ಆಯ್ಕೆಯಾಗಿದ್ದು ಬಿಜೆಪಿ ನಾಯಕರ ಬರಗಾಲ ಎದುರಿಸುತ್ತಿರುವುದಕ್ಕೆ ನಿದರ್ಶನ ಎಂದು ವ್ಯಂಗ್ಯ ಮಾಡಿದೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಂತಹ ನಾಯಕರೆದುರು ತರಗೆಲೆಯಂತಹ ವ್ಯಕ್ತಿಯನ್ನು ತಂದು ಕೂರಿಸಿದೆ ಬಿಜೆಪಿ ಎಂದು ಕಾಂಗ್ರೆಸ್​ ಆಡಿಕೊಂಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!