BIG NEWS | ವಿಪಕ್ಷ ನಾಯಕರಾಗಿ ಆರ್‌.ಅಶೋಕ್‌ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಒಕ್ಕಲಿಗ ಸಮುದಾಯದ ನಾಯಕ, ಮಾಜಿ ಉಪ ಮುಖ್ಯಮಂತ್ರಿ, ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಶಾಸಕ ಆರ್​ ಅಶೋಕ (R Ashoka) ಅವರಿಗೆ ಪ್ರತಿಪಕ್ಷ ನಾಯಕರಾಗಿ ಬಿಜೆಪಿ ಆಯ್ಕೆ ಮಾಡಿದೆ.

ಬೆಂಗಳೂರಿನ ಐಟಿಸಿ ಹೋಟೆಲ್​ನಲ್ಲಿ ಶುಕ್ರವಾರ ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ (BJP Meeting) ಈ ನಿರ್ಧಾರ ಕೈಗೊಳ್ಳಲಾಯಿತು.

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರಿನ ಐಟಿಸಿ ಹೋಟೆಲ್​ನಲ್ಲಿ ನಡೆದ ಬಿಎಲ್​ಪಿ ಸಭೆಯಲ್ಲಿ ಹೈಕಮಾಂಡ್ ವೀಕ್ಷಕರಾದ ನಿರ್ಮಲಾ, ದುಷ್ಯಂತ್ ಕುಮಾರ್ ಉಪಸ್ಥಿತರಿದ್ದರು. ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ರಾಜ್ಯ ಬಿಜೆಪಿ ಘಟಕದ ಸಂಘಟನಾ ಕಾರ್ಯದರ್ಶಿ ರಾಜೇಶ್ ಮತ್ತಿತರರು ಭಾಗವಹಿಸಿದ್ದರು.

ಶಾಸಕರನ್ನು ಉದ್ದೇಶಿಸಿ ಭಾಷಣದ ವೇಳೆ ವಿಪಕ್ಷ ನಾಯಕರ ವಿಚಾರವಾಗಿ ಹೈಕಮಾಂಡ್ ಸೂಚನೆಯನ್ನು ಸೂಚ್ಯವಾಗಿ ದುಶ್ಯಂತ್ ಕುಮಾರ್ ಗೌತಮ್ ಮತ್ತು ಬಿ.ಎಸ್‌. ಯಡಿಯೂರಪ್ಪ ಪ್ರಸ್ತಾಪಿಸಿದರು. ಅಶೋಕ್ ಹೆಸರು ಘೋಷಣೆಗೆ ಮಾಜಿ ಸಿಎ ಬಸವರಾಜ ಬೊಮ್ಮಾಯಿ ಸೂಚಿಸಿದರೆ, ಮಾಜಿ ಸಚಿವ ಸುನೀಲ್ ಕುಮಾರ್ ಅನುಮೋದನೆ ಮಾಡಿದರು.

ಕಳೆದ ವಾರವಷ್ಟೇ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಬಿವೈ ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!