ಹೊಸದಿಗಂತ ವರದಿ ಬೆಂಗಳೂರು :
ದಕ್ಷಿಣ ಭಾರತದ ಇಸ್ರೇಲ್ ಕಾನ್ಸುಲೇಟ್ ಜನರಲ್ ಟಾಮಿ ಬೆನ್ – ಹೈಮ್ ಅವರು ಇಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ ಅವರ ಗೃಹ ಕಚೇರಿಗೆ ಸೌಹಾರ್ದಯುತ ಭೇಟಿ ನೀಡಿ ಮಾತುಕತೆ ನಡೆಸಿದರು.
ಪ್ರಧಾನಿ ನರೇಂದ್ರ ನೋದಿ ಅವರ ನೇತೃತ್ವದಲ್ಲಿ ಭಾರತ – ಇಸ್ರೇಲ್ ನಡುವಿನ ಬಾಂಧವ್ಯ ಇನ್ನಷ್ಟು ಗಟ್ಟಿಗೊಂಡಿದ್ದು, ಅದರಲ್ಲೂ ವಿಶೇಷವಾಗಿ ಆಧುನಿಕ ಕೃಷಿ ತಂತ್ರಜ್ಞಾನ, ಸೆಮಿಕಂಡಕ್ಟರ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಕರ್ನಾಟಕ ಮತ್ತು ಇಸ್ರೇಲ್ ಒಟ್ಟಾಗಿ ಕೆಲಸ ಮಾಡಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.